ವಿಕಸಿತ ಭಾರತಕ್ಕೆ ಮಾದರಿ ಬಜೆಟ್ ಎಂದ ಸಂಸದ ಬಸವರಾಜ ಬೊಮ್ಮಾಯಿ

Kannadaprabha News   | Kannada Prabha
Published : Feb 02, 2026, 06:19 AM IST
BJP MP Basavaraj Bommai

ಸಾರಾಂಶ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್, ಭಾರತವನ್ನು ವಿಶ್ವದ 3ನೇ ಆರ್ಥಿಕ ಶಕ್ತಿಯನ್ನಾಗಿಸುವ ವಿಕಸಿತ ಭಾರತದ ಗುರಿ ಹೊಂದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶ್ಲಾಘಿಸಿದ್ದಾರೆ. ಈ ಬಜೆಟ್ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅವರು ಹೇಳಿದ್ದಾರೆ.

ಹಾವೇರಿ: ಭಾರತವನ್ನು ವಿಶ್ವದ 3ನೇ ಆರ್ಥಿಕ ಶಕ್ತಿಯನ್ನಾಗಿ ಮಾಡಲು ವಿಕಸಿತ ಭಾರತ ಕಟ್ಟುವಂತಹ ಅಭಿವೃದ್ಧಿ ಶೀಲವಾಗಿರುವ ಮಾದರಿ ಬಜೆಟ್‌ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟ್‌ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ನಾಗರಿಕರ ಸಾಮರ್ಥ್ಯವನ್ನು ದೇಶದ ಆರ್ಥಿಕ ಚಟುವಟಿಕೆಯಲ್ಲಿ ಅಳವಡಿಸಲು ಯೋಜನೆಗಳನ್ನು ಹಲವಾರು ನೀತಿಗಳನ್ನು ಈ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಭವಿಷ್ಯದ ಚಾಂಪಿಯನ್‌ಗಳಿಗಾಗಿ 10 ಸಾವಿರ ಕೋಟಿ ಆರ್ಥಿಕ ನೆರವು

ಭವಿಷ್ಯದ ಚಾಂಪಿಯನ್‌ಗಳಿಗಾಗಿ ಸುಮಾರು 10 ಸಾವಿರ ಕೋಟಿ ರು. ಆರ್ಥಿಕ ನೆರವು ಕೊಡುವಂತಹ ಯೋಜನೆ ಮಾಡಿದ್ದಾರೆ. ಆರ್ಥಿಕ ಅಭಿವೃದ್ಧಿ ಸ್ಥೀರೀಕರಣ ಮತ್ತು ಹಣದುಬ್ಬರ ನಿಯಂತ್ರಣ ಮಾಡುವುದು, ಜನರ ಆಶೋತ್ತರಗಳನ್ನು ಈಡೇರಿಸುವುದರ ಜೊತೆಗೆ 7.4 ಆರ್ಥಿಕ ಬೆಳವಣಿಗೆಯನ್ನು ಮುಂದುವರೆಸಿ ಎಲ್ಲ ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್ ಆಗಿದೆ ಎಂದರು.

ಸಣ್ಣ ಕೈಗಾರಿಕೆಗಳಿಗೆ ವಿಶೇಷ ಒತ್ತು

ಸಣ್ಣ ಕೈಗಾರಿಕೆಗೆ ವಿಶೇಷವಾದ ಒತ್ತು ಕೊಟ್ಟಿದ್ದಾರೆ. ಟೆಕ್ಸಟೈಲ್, ಚರ್ಮದ ಉತ್ಪನ್ನಗಳು, ಐಟಿ, ಬಿಟಿ ಡಾಟಾ ಸೆಂಟರ್‌ಗಳಿಗೆ ಬಹಳಷ್ಟು ಒತ್ತು ಕೊಟ್ಟಿದ್ದಾರೆ. ವಿಶೇಷವಾಗಿ ನಗರ ಮೂಲಸೌಕರ್ಯಕ್ಕೆ ಬಹಳ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಬಹಳಷ್ಟು ಒತ್ತು ಕೊಟ್ಟಿದೆ. ಸುಮಾರು 12.5 ಲಕ್ಷ ಕೋಟಿ ರು.ಗಳನ್ನು ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ಹೂಡುತ್ತಿದೆ. ವಿತ್ತೀಯ ಕೊರತೆಯನ್ನು 4.3ಗೆ ನಿಯಂತ್ರಣ ಮಾಡಿರುವುದು ದೊಡ್ಡ ಸಾಧನೆ. ಮೂಲ ಸೌಕರ್ಯದಲ್ಲಿ ರಸ್ತೆ, ಹೈ ಸ್ಪೀಡ್ ರೈಲುಗಳು, 20 ಜಲ ಸಾರಿಗೆಗೆ ಒತ್ತು ಕೊಟ್ಟಿರುವುದು ಸಾರಿಗೆಯಲ್ಲಿ ಹೊಸ ಆಯಾಮ ತೆರೆದಂತಾಗಿದೆ. ಅಭಿವೃದ್ಧಿ ಪಥದಲ್ಲಿ ಭಾರತವನ್ನು ಆರ್ಥಿಕವಾಗಿ ವಿಶ್ವದ ಮೂರನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್‌ನ್ನು ಮಂಡಿಸಲಾಗಿದೆ.

ವಿದೇಶಗಳಿಂದ ಬರುವ ವಸ್ತುಗಳಿಗೆ ಸಂಪೂರ್ಣ ತೆರಿಗೆ ಫ್ರೀ ಮಾಡಿದ್ದಾರೆ. ನಾಲ್ಕು ಕರ್ತವ್ಯ ಪಥ ಅಂತ ಹೇಳಿದ್ದಾರೆ. ಮೊದಲನೆಯದಾಗಿ ಆರ್ಥಿಕ ಬೆಳವಣಿಗೆ, ಎರಡನೇಯದು ಸಬ್ ಕಾ ಸಾಥ್ ಸಬ್ ಕೆ ವಿಕಾಸ್ ಎನ್ನುವ ತತ್ವದಲ್ಲಿ ಮಹಿಳೆಯರು, ಯುವಕರು, ರೈತರು ಎಲ್ಲರನ್ನು ಒಳಗೊಂಡಿರುವ ಬಜೆಟ್ ಇದಾಗಿದೆ ಎಂದರು.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಇರಾನ್‌ ಬದಲು ವೆನಿಜುವೆಲಾದಿಂದ ಭಾರತ ತೈಲ ಖರೀದಿ : ಅಧ್ಯಕ್ಷ ಟ್ರಂಪ್‌
ರಾಜ್ಯಕ್ಕೆ ಇಷ್ಟೊಂದು ಅನ್ಯಾಯ ಮಾಡ್ತಾರೆ ಅಂತ ನಿರೀಕ್ಷೆ ಇರಲಿಲ್ಲ : ಡಿಸಿಎಂ ಡಿಕೆಶಿ