
ನವದೆಹಲಿ(ಮಾ.24): ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರ ಕಳೆದ ಹಲವು ವರ್ಷಗಳ ಬೇಡಿಕೆಯನ್ನು ಇಂದು ಕೇಂದ್ರ ಕ್ಯಾಬಿನೆಟ್ ಅಂಗೀಕರಿಸಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 4 ರಿಂದ ಶೇಕಡಾ 42ಕ್ಕೆ ಹೆಚ್ಚಿಸಲಾಗಿದೆ. ಈ ಕುರಿತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. ಈ ವರ್ಷದ ಆರಂಭದಿಂದ ಅಂದರೆ 2023ರ ಜನವರಿ 1 ರಿಂದ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹಾಗೂ ಪಿಂಚಣಿದಾರರಿಗೆ ಡಿಆರ್ ಹೆಚ್ಚುವರಿ ಕಂತಿನ ಹಣ ಬಿಡುಗಡೆ ಮಾಡಲು ಸಟಿವ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಕ್ಯಾಬಿನೆಟ್ ನಿರ್ಧಾರದಿಂದ ಕೇಂದ್ರದ 47.58 ಲಕ್ಷ ಉದ್ಯೋಗಗಿಗಳು ಹಾಗೂ 69.76 ಲಕ್ಷ ಪಿಂಚಣಿದಾರರಿಗೆ ನೆರವಾಗಲಿದೆ.
ಸಚಿವ ಸಂಪುಟದ ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ 12,815 ಕೋಟಿ ರೂಪಾಯಿ ಹೊರೆಯಾಗಲಿದೆ. ಒಟ್ಟಾರೆಯಾಗಿ ಕೇಂದ್ರದ 1 ಕೋಟಿ ಉದ್ಯೋಗಿಗಳಿಗೆ ಪ್ರಯೋಜನವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಏಳನೇ ವೇತನ ಆಯೋಗ: ಸರ್ಕಾರಿ ಉದ್ಯೋಗಿಗಳ ಕನಿಷ್ಠ ವೇತನದಲ್ಲಿ ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ
7ನೇ ವೇತನ ಆಯೋಗದ ಅಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡಾ 38ರ ದರದಲ್ಲಿ ಡಿಎ ಹಾಗೂ ಡಿಆರ್ ಪಾವತಿಸಲಾಗುತ್ತಿದೆ. ಇದೀಗ ಶೇಕಡಾ 4 ರಷ್ಟು ಹೆಚ್ಚಳದಿಂದ ನೌಕರರ ವೇತನ ಹೆಚ್ಚಳವಾಗಲಿದೆ. ಈ ತಿಂಗಳ ವೇತನ ಅಂದರೆ ಮಾರ್ಚ್ ತಿಂಗಳ ವೇತನ ಪಾವತಿಯಲ್ಲಿ ಶೇಕಡಾ 42ರ ದರದಲ್ಲಿ ತುಟ್ಟಿ ಭತ್ಯೆ ಪಾವತಿ ಮಾಡಲಾಗುತ್ತದೆ. ಇದೇ ತಿಂಗಳಲ್ಲಿ ಜನವರಿ ಹಾಗೂ ಫೆಬ್ರವರಿ ತಿಂಗಳ ಬಾಕಿಯನ್ನು ಪಾವತಿಸಲಾಗುತ್ತದೆ. ಕಾರಣ ಹೊಸ ಆದೇಶ ಜನವರಿ1, 2023ರಿಂದ ಜಾರಿಯಾಗಲಿದೆ.
ಕೇಂದ್ರ ಸರಕಾರಿ ನೌಕರರಿಗೆ ಡಬಲ್ ಖುಷ್: ಡಿಎ, ದೈನಂದಿನ ಸ್ಯಾಲರಿ ಹೆಚ್ಚಳ!
ಡಿಎ ಹಾಗೂ ಆರ್ ಹೆಚ್ಚಳದಿಂದ ಸರ್ಕಾರಿ ನೌಕರರ ವೇತನ ಊದಾಹರಣೆಗೆ ತಿಂಗಳ ವೇತನ 20,000 ರೂಪಾಯಿ ಆಗಿದ್ದರೆ, ಹೊಸ ಆದೇಶದ ಪ್ರಕಾರ ಶೇಕಡಾ 4 ರಷ್ಟು ಹೆಚ್ಚಳದಿಂದ ಪ್ರತಿ ತಿಂಗಳ ಸಂಬಳದಲ್ಲಿ 800 ರೂಪಾಯಿ ಏರಿಕೆಯಾಗಲಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.