ವಿಕೆಂಡ್’ನಲ್ಲಿ ಜನತೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ| ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವ ಗಡುವು ವಿಸ್ತರಣೆ| ಡಿಸೆಂಬರ್ 31ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ ಹಣಕಾಸು ಸಚಿವಾಲಯ| ಆಧಾರ್ ಜೊತೆ ಪ್ಯಾನ್ ಜೋಡಣೆ ಮಾಡದಿದ್ದರೆ, ತೆರಿಗೆ, ಬ್ಯಾಂಕಿಂಗ್, ಹಣಕಾಸು ವ್ಯವಹಾರಗಳಿಗೆ ತೊಡಕು|
ನವದೆಹಲಿ(ಸೆ.28): ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಇದೇ ಸೆ.30ರ ಗಡುವು ವಿಧಿಸಲಾಗಿತ್ತು. ಇದೀಗ ಡಿಸೆಂಬರ್ 31ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
undefined
ಈ ಕುರಿತು ಸೂಚನೆ ಹೊರಡಿಸಿರುವ ಹಣಕಾಸು ಸಚಿವಾವಲಯ, ಡಿ.31ರೊಳಗಾಗಿ ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವಂತೆ ಸ್ಪಷ್ಟಪಡಿಸಿದೆ.
ಆಧಾರ್ ಜೊತೆ ಪ್ಯಾನ್ ಜೋಡಣೆ ಮಾಡದಿದ್ದರೆ, ತೆರಿಗೆ, ಬ್ಯಾಂಕಿಂಗ್, ಹಣಕಾಸು ವ್ಯವಹಾರಗಳಿಗೆ ತೊಡಕಾಗುವ ಸಾಧ್ಯತೆಗಳಿದ್ದು, ಆದಷ್ಟು ಬೇಗ ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಒಳಿತು.