
ಬೆಂಗಳೂರು(ಮಾ.08): ಕೊರೋನಾದಿಂದ ಕಂಗೆಟ್ಟು ಆರ್ಥಿಕವಾಗಿ ನಲುಗಿದ್ದ ರಾಜ್ಯಕ್ಕೆ ಬಿಎಸ್ ಯಡಿಯೂರಪ್ಪ ಬಜೆಟ್ ಟಾನಿಕ್ ನೀಡಿದ್ದಾರೆ. ಆರೋಗ್ಯ, ಕೃಷಿ, ಮಹಿಳಾ ವರ್ಗ ಹೀಗೆ ಅನೇಕ ಕ್ಷೇತ್ರಗಳಿಗೆ ಅನುದಾನ, ಘೊಷಣೆ ಮಾಡಿರುವ ಸಿಎಂ ಯಡಿಯೂರಪ್ಪ ಮೀನುಗಾರಿಕಾ ಕ್ಷೇತ್ರಕ್ಕೂ ಕೆಲ ಘೋಷಣೆಗಳನ್ನು ಮಾಡಿದ್ದಾರೆ.
* 2015-16 ರಿಂದ ಯಾಂತ್ರೀಕೃತ ದೋಣಿಗಳಿಗೆ 1.5 ಲಕ್ಷ ಕಿ. ಲೀ ಡೀಸೆಲ್ ಮೇಲಿನ ಮಾರಾಟ ಕರ ಮರುಪಾವತಿಯ ಬದಲು ಡೀಸೆಲ್ ಡೆಲಿವರಿ ಪಾಯಿಂಟ್‌ನಲ್ಲಿಯೇ ಕರರಹಿತ ದರದಲ್ಲಿ ಡೀಸೆಲ್ ವಿತರಣೆಗೆ ಕ್ರಮ.
* ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನಕ್ಕೆ 62 ಕೋಟಿ ರೂ. ಅನುದಾನ.
* 16 ಮೀನುಮರಿ ಉತ್ಪಾದನಾ ಕೇಂದ್ರಗಳ ತಾಂತ್ರಿಕ ಉನ್ನತೀಕರಣಕ್ಕೆ 2 ಕೋಟಿ ರೂ. ಅನುದಾನ.
* ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಆರು ಕೋಟಿ ರೂ ವೆಚ್ಚದಲ್ಲಿ ಮೀನು ಉತ್ಪನ್ನಗಳ ಸಂಸ್ಕರಣೆಗೆ ಆಧುನಿಕ ಸಂಸ್ಕರಣಾ ಮತ್ತು ಮೌಲ್ಯವರ್ಧನಾ ಕೇಂದ್ರ ಸ್ಥಾಪನೆ.
* ರಾಜ್ಯಾದ್ಯಂತ ಮೂವತ್ತು ಕೋಟಿ ರೂ. ವೆಚ್ಚದಲ್ಲಿ ಮೀನು ಮಾರಾಟ ಘಟಕ ಹಾಗೂ ಮತ್ಸ್ಯ ದರ್ಶಿನಿಗಳ ಸ್ಥಾಪನೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.