ಆಷಾಢ ಬಂಪರ್... ಎರಡನೇ ದಿನವೂ ಇಳಿಕೆಯಾದ ಚಿನ್ನದ ದರ; 3 ಸಾವಿರಕ್ಕೂ ಕಡಿಮೆಯಾದ ಬೆಲೆ

By Mahmad RafikFirst Published Jul 20, 2024, 10:24 AM IST
Highlights

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 6,780
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 7,397

Latest Videos

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 54,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 59,176

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 67,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 73,970

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  6,78,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 7,39,700

ಜಗತ್ತಿನೆಲ್ಲೆಡೆ ಹಠಾತ್ ಆಫ್ ಆದ ಮೈಕ್ರೋಸಾಫ್ಟ್‌ ವಿಂಡೋ ಸಿಸ್ಟಂ: ವಿಮಾನಯಾನ, ಬ್ಯಾಂಕ್ ಸೇವೆಗಳಿಗೆ ತೀವ್ರ ಅಡ್ಡಿ

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 73,970 ಆಗಿದ್ದರೆ ಚೆನ್ನೈ 74,620 ಮುಂಬೈ  73,970 ಹಾಗೂ ಕೋಲ್ಕತ್ತಾದಲ್ಲಿ 73,970 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  74,120 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 916.50 ರೂ. 9,165ಗೂ ರೂ. 91,650 ರೂ.ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 97,650 ಆಗಿದ್ದರೆ,  ಮುಂಬೈನಲ್ಲಿ ರೂ. 93,150 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 93,150 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 93,150 ಆಗಿದೆ.

ಟ್ಯಾಂಕ್ ಫುಲ್ ಮಾಡಿಸೋ ಮುನ್ನ ಗೊತ್ತಿರಲಿ ದರ; ಇಂದಿನ ಪೆಟ್ರೋಲ್ ಡೀಸೆಲ್ ಬೆಲೆ

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದು ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

click me!