ಎಚ್‌ಡಿಕೆ, ಸಿದ್ದು ಕ್ಷೇತ್ರಗಳಿಗೆ ತಲಾ 1 ಯೋಜನೆ

By Kannadaprabha NewsFirst Published Mar 9, 2021, 7:26 AM IST
Highlights

 ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ನೀಡಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪ್ರಸಕ್ತ ಬಜೆಟ್‌ನಲ್ಲಿ ತಲಾ ಒಂದೊಂದು ಯೋಜನೆಯನ್ನು ಮಾತ್ರ ನೀಡಿದ್ದಾರೆ.

ಬೆಂಗಳೂರು (ಮಾ.09):  ಕಳೆದ 2020-21ನೇ ಸಾಲಿನ ಬಜೆಟ್‌ನಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ನೀಡಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪ್ರಸಕ್ತ ಬಜೆಟ್‌ನಲ್ಲಿ ತಲಾ ಒಂದೊಂದು ಯೋಜನೆಯನ್ನು ಮಾತ್ರ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರದ ಗುಳೇದಗುಡ್ಡದಲ್ಲಿ ’ಜವಳಿ ಪಾರ್ಕ್’ ಸ್ಥಾಪನೆ ಮಾಡಿ 50 ಕೋಟಿ ರು. ಅನುದಾನ ಮೀಸಲಿಡುವಂತೆ ಜ.11 ರಂದು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು.

ಕರ್ನಾಟಕ ಬಜೆಟ್ 2021: ನಿಮ್ಮ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ನೋಡಿ .

ಇದರಂತೆ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪಿಸುವುದಾಗಿ ಘೋಷಿಸಿದ್ದು, ನೇಕಾರರ ಜೀವನೋಪಾಯ ಉತ್ತೇಜಿಸಲು ಮತ್ತು ಸ್ಥಳೀಯವಾಗಿ ಉದ್ಯೋಗವಕಾಶಗಳನ್ನು ನೀಡಿ ಗುಳೆ ಹೋಗುವುದನ್ನು ತಡೆಯಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಜವಳಿ ಪಾರ್ಕ್ ಸ್ಥಾಪಿಸುವುದಾಗಿ ತಿಳಿಸಿದ್ದಾರೆ.

ಇನ್ನು ಎಚ್‌.ಡಿ. ಕುಮಾರಸ್ವಾಮಿ ಅವರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಹೈ-ಟೆಕ್‌ ರೇಷ್ಮೆಗೂಡು ಮಾರುಕಟ್ಟೆಯನ್ನು ನಬಾರ್ಡ್‌ ಸಹಯೋಗದಲ್ಲಿ 75 ಕೋಟಿ ರು. ವೆಚ್ಚದಲ್ಲಿ ನಿರ್ಮಿಸುವುದಾಗಿ ಘೋಷಿಸಲಾಗಿದೆ.

click me!