ಹೇಗಿದೆ ಇಂದು ನಿಮ್ಮ ನಗರದಲ್ಲಿ ಬಂಗಾರದ ದರ

By Anusha KbFirst Published Jun 30, 2023, 10:51 AM IST
Highlights

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,385
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5875

Latest Videos

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 43,080
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 47,000    

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 53,850
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 58,750

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  5,38,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,87,500

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 53,850 ಆಗಿದ್ದರೆ ಚೆನ್ನೈ  54,370, ಮುಂಬೈ 53,850 ಹಾಗೂ ಕೋಲ್ಕತ್ತಾದಲ್ಲಿ 53,850 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  54,000 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 712,50ರೂ. 7125 ಹಾಗೂ ರೂ. 71,250 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74, 800 ಆಗಿದ್ದರೆ,  ಮುಂಬೈನಲ್ಲಿ ರೂ. 71,400 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 71,400 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 71,400 ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

click me!