ಹೇಗಿದೆ ಇಂದು ನಿಮ್ಮ ನಗರದಲ್ಲಿ ಬೆಳ್ಳಿ ಬಂಗಾರದ ದರ

Published : Oct 13, 2023, 10:48 AM ISTUpdated : Oct 15, 2023, 10:31 AM IST
ಹೇಗಿದೆ ಇಂದು ನಿಮ್ಮ ನಗರದಲ್ಲಿ ಬೆಳ್ಳಿ ಬಂಗಾರದ ದರ

ಸಾರಾಂಶ

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ.  ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ.  ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5891

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 43,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 47,128

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 54,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 58,910

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  5,40,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,89,100

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 54,000 ಆಗಿದ್ದರೆ ಚೆನ್ನೈ  54,100, ಮುಂಬೈ 54,000 ಹಾಗೂ ಕೋಲ್ಕತ್ತಾದಲ್ಲಿ 54,000 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  54,150 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 715 ರೂ. 7150 ಹಾಗೂ ರೂ. 71500 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ.  75,000 ಆಗಿದ್ದರೆ,  ಮುಂಬೈನಲ್ಲಿ ರೂ. 72,600 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 72,600 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 72, 600 ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!