ಚಿನ್ನದ ದರದಲ್ಲಿ ಕೊಂಚ ಇಳಿಕೆ, ನಿಮ್ಮ ನಗರದಲ್ಲಿ ಬಂಗಾರದ ದರ ಹೇಗಿದೆ?

By Santosh Naik  |  First Published Jun 18, 2024, 12:14 PM IST


ಇಂದು ದೇಶದಲ್ಲಿ ಚಿನ್ನದ ದರದಲ್ಲಿ ಕೊಂಚ ಪ್ರಮಾಣದ ಇಳಿಕೆಯಾಗಿದೆ. ನೀವಿರೋ ನಗರದಲ್ಲಿ ಎಷ್ಟು ಇಳಿಕೆಯಾಗಿದೆ ಅನ್ನೋದರ ಡೀಟೇಲ್ಸ್‌ ಇಲ್ಲಿದೆ. 
 


ದೇಶದ Share Market ನಲ್ಲಿ ಚಿನ್ನ ಪ್ರಮುಖ ಹೂಡಿಕೆಯ ವಿಚಾರ. ಗೋಲ್ಡ್‌ಬಾಂಡ್‌ ಪರಿಚಯವಾದ ಬಳಿಕ ಡಿಜಿಟಲ್‌ ಗೋಲ್ಡ್‌ಗೂ ಅಪಾರ ಬೇಡಿಕೆ ವ್ಯಕ್ತವಾಗಿದೆ. ಇದೇ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 6620
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 7,222

Tap to resize

Latest Videos

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 52,960
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 57,776

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 66,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 72,220

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  6,62,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 7,22,200

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 72,220 ಆಗಿದ್ದರೆ ಚೆನ್ನೈ 73,040, ಮುಂಬೈ  72,220ಹಾಗೂ ಕೋಲ್ಕತ್ತಾದಲ್ಲಿ 72,220 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  72,470 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 910 ರೂ. 9100 ಹಾಗೂ ರೂ. 91,000 ರೂಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 96,000 ಆಗಿದ್ದರೆ,  ಮುಂಬೈನಲ್ಲಿ ರೂ. 91,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 91,500 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 91,500 ಆಗಿದೆ.

ಬೆಟ್ಟದ ತುದಿಯಲ್ಲಿ ಕಾರ್‌ ರಿವರ್ಸ್‌ ಮಾಡುವ ರೀಲ್‌, 300 ಫೀಟ್‌ ಆಳಕ್ಕೆ ಬಿದ್ದು ಯುವತಿ ಸಾವು ಕಂಡ ವಿಡಿಯೋ ವೈರಲ್‌!

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದು ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ.

ಹೆತ್ತ ಮೂವರು ಗಂಡು ಮಕ್ಕಳನ್ನ ಬೀದಿಪಾಲು ಮಾಡಿ 25 ವರ್ಷದ ಯುವಕನೊಂದಿಗೆ ತಾಯಿ ಜೂಟ್‌!

click me!