Gold Silver Price Today: ವೀಕೆಂಡ್‌ನಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಹೇಗಿದೆ ನೋಡಿ..

By BK Ashwin  |  First Published Dec 23, 2023, 11:11 AM IST

ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..


Gold Rate on December 23rd 2023: ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಇನ್ನು, ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ - ಇಳಿಕೆ, ಹಾಗೂ ಮುಂತಾದ ಕಾರಣಗಳಿಂದಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? 

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

Tap to resize

Latest Videos

ಇದನ್ನು ಓದಿ: PETROL DIESEL PRICE TODAY: ವೀಕೆಂಡ್‌ನಲ್ಲಿ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ..

ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಏರಿಕೆಯಾಗಿದ್ದು, ಆದರೆ ಬೆಳ್ಳಿ ದರದಲ್ಲಿ ಹಲವೆಡೆ ಇಳಿಕೆಯಾಗಿದೆ. ಇನ್ನೊಂದೆಡೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,820
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,349

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,560
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,792

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 58,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 63,490

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,82,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,34,900

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 58,200 ಆಗಿದ್ದು ನಿನ್ನೆಗಿಂತ ಬೆಲೆ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 58,750, ರೂ. 58,200 ಹಾಗೂ 58,200 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 58,350 ರೂ. ಆಗಿದ್ದು, ಬೆಲೆ ಹೆಚ್ಚಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಹಲವೆಡೆ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ಬೆಲೆಯಲ್ಲಿ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 770, ರೂ. 7,700 ಹಾಗೂ ರೂ. 77,000 ಗಳಾಗಿವೆ. ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 80,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 79,000 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 79,000 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 79,000 ರೂ. ಆಗಿದ್ದು, ಬೆಳ್ಳಿ ಬೆಲೆಯಲ್ಲಿ ಹಲವೆಡೆ ಇಳಿಕೆಯಾಗಿದೆ.

click me!