ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಇನ್ನು, ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ - ಇಳಿಕೆ, ಹಾಗೂ ಮುಂತಾದ ಕಾರಣಗಳಿಂದಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ..?
ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಅದೇ ರೀತಿ, ಬೆಳ್ಳಿ ದರದಲ್ಲಿ ಸಹ ಯಾವುದೇ ವ್ಯತ್ಯಾಸವಾಗಿಲ್ಲ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..
ಇದನ್ನು ಓದಿ: Petrol Diesel Price Today: ಹೊಸ ವರ್ಷದ ಮೊದಲ ದಿನ ನಿಮ್ಮ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೇಗಿದೆ ನೋಡಿ..
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,855
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,387
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,840
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,096
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 58,550
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 63,870
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,85,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,38,700
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 58,550 ಆಗಿದ್ದು ನಿನ್ನೆ ಸಹ ಇಷ್ಟೇ ಬೆಲೆ ಇತ್ತು. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 59,100, ರೂ. 58,550 ಹಾಗೂ 58,550 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಸೋಮವಾರ 58,700 ರೂ. ಆಗಿದ್ದು, ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.
ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 760, ರೂ. 7,600 ಹಾಗೂ ರೂ. 76,000 ಗಳಾಗಿವೆ. ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 80,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 78,600 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 78,600 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 78,600 ರೂ. ಆಗಿದ್ದು, ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.