Gold Silver Price Today: ಬೆಳ್ಳಿ ದರದಲ್ಲಿ ಇಳಿಕೆ; ಇಂದಿನ ಚಿನ್ನದ ಬೆಲೆ ವಿವರ ನೋಡಿ..

By BK AshwinFirst Published May 14, 2023, 10:04 AM IST
Highlights

ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ - ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? 

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇದನ್ನು ಓದಿ: Petrol Diesel Price Today: ತುಮಕೂರಲ್ಲಿ ಇಳಿಕೆಯಾದ, ಚಿಕ್ಕಮಗಳೂರಲ್ಲಿ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ಬೆಲೆ

ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಏರಿಕೆಯಾಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,670
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,185

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 45,360
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 49,480

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 56,700
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 61,850

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,67,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,18,500

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 56,700 ಆಗಿದ್ದು ನಿನ್ನೆಗಿಂತ ಬೆಲೆ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 57,150, ರೂ. 56,650 ಹಾಗೂ 56,650 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಭಾನುವಾರ 56,800 ರೂ. ಆಗಿದ್ದು, ಬೆಲೆಯಲ್ಲಿ ಜಾಸ್ತಿಯಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಆದರೆ ಬೆಳ್ಳಿ ಬೆಲೆಯಲ್ಲಿ ಕಡಿಮೆಯಾಗಿದೆ.  ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 785, ರೂ. 7,850 ಹಾಗೂ ರೂ. 78,500 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 78,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 74,800 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 74,800 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 74,800 ರೂ. ಆಗಿದ್ದು, ಬೆಲೆಯಲ್ಲಿ ಇಳಿಕೆಯಾಗಿದೆ. 

click me!