
Petrol Diesel Price December 16th 2022: ಜಾಗತಿಕ ಕಚ್ಚಾ ತೈಲದ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ದೊಡ್ಡ ಮಟ್ಟದ ಇಳಿಕೆ ದಾಖಲಾಗಿದೆ. ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದ ಕಚ್ಚಾ ತೈಲದ ದರ ಈಗ ಪ್ರತಿ ಬ್ಯಾರಲ್‌ಗೆ 80 ಡಾಲರ್ ಸನಿಹದಲ್ಲಿದೆ. ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಇಂಧನ ದರಗಳಲ್ಲಿ ಕೊಂಚ ಮಟ್ಟದ ಇಳಿಕೆ ದಾಖಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಧನ ದರದಲ್ಲಿ ಇಳಿಕೆ ಕಾಣುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಪೆಟ್ರೋಲ್ (Petrol), ಡೀಸೆಲ್ (Diesel) ಬೆಲೆ ಇಳಿಕೆ ಮಾಡುತ್ತಿಲ್ಲ. ಈ ಹಿನ್ನೆಲೆ, ರಾಷ್ಟ್ರ ರಾಜಧಾನಿ ದೆಹಲಿ (New Delhi), ಬೆಂಗಳೂರು (Bengaluru) ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಯಾವುದೇ ದೊಡ್ಡ ಮಟ್ಟ ವ್ಯತ್ಯಾಸ ಕಂಡಿಲ್ಲ. ಪ್ರತಿದಿನ ಬೆಳಗ್ಗೆ 6 ಗಂಟೆಗೆ ದೇಶದ ಹಲವು ಕಡೆ ಇಂಧನ ದರಗಳಲ್ಲಿ ಬದಲಾಗುತ್ತದೆ. ರಾಜಧಾನಿ ಬೆಂಗಳೂರಿನಲ್ಲಿ 2022ರ ಮೇ ತಿಂಗಳಿನಿಂದಲೂ ಒಂದು ಲೀಟರ್ ಪೆಟ್ರೋಲ್‌ಗೆ 101.94 ರೂಪಾಯಿ ಇದ್ದು, ಅದರಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಡೀಸೆಲ್ ಅನ್ನು 87.89 ರೂ. ಗೆ ಮಾರಾಟ ಮಾಡಲಾಗುತ್ತಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಎಫ್ಎಂಸಿಜೆ ಕ್ಷೇತ್ರಕ್ಕೆ ರಿಲಯನ್ಸ್ ಎಂಟ್ರಿ; ಇಂಡಿಪೆಂಡೆನ್ಸ್ ಬ್ರ್ಯಾಂಡ್ ಅಡಿಯಲ್ಲಿ ಉತ್ಪನ್ನಗಳ ಬಿಡುಗಡೆ
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:
Business Idea: ಸಣ್ಣ ಹೂಡಿಕೆ ಮಾಡಿ ಇಂದೇ ಗಳಿಕೆ ಶುರು ಮಾಡಿ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.