ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..
Petrol Diesel Price March 7th 2023: ಇತ್ತೀಚೆಗೆ ಕಚ್ಚಾ ತೈಲ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಜತೆಗೆ ಸಿಲಿಂಡರ್ ಬೆಲೆಯಲ್ಲೂ ಏರಿಕೆಯಾಗಿದೆ. ಇನ್ನೊಂದೆಡೆ, ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆಯಾಗಬಹುದು, ಇದರಿಂದ ಇಂಧನ ಬೆಲೆ ಇಳಿಕೆಯಾಗಬಹುದೆಂಬ ಮಾತು ಕೇಳಿಬಂದಿದ್ದರೂ ಆ ಆಶೋತ್ತರ ಇನ್ನೂ ಈಡೇರಿಲ್ಲ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೆ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತದೆ. ಈ ಪೈಕಿ ಪೆಟ್ರೋಲ್ ಬೆಲೆ ಏರಿಕೆಯಾದರೆ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತದೆ. ಇನ್ನು, ಡೀಸೆಲ್ ಬೆಲೆ ಹೆಚ್ಚಳವಾದರಂತೂ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಈ ಹಿನ್ನೆಲೆ, ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೂ, ಇತರೆಡೆ, ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ - ಇಳಿಕೆಯಾಗುತ್ತಿದೆ.
ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ (Petrol) - ಡೀಸೆಲ್ (Diesel) ಬೆಲೆ ವಿವರ ಹೀಗಿದೆ ನೋಡಿ..
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು: