
Petrol Diesel Price November 18th 2022: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil Price) ಬೆಲೆಯಲ್ಲಿ ಕೊಂಚ ಮಟ್ಟದ ಏರಿಳಿತ ಕಂಡು ಬರುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಗಳು ಆಗುತ್ತಿಲ್ಲ. ಇದರ ನಡುವೆ ಅಂತಾರಾಷ್ಟ್ರೀಯ ಸಂಬಂಧಗಳು, ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಕೂಡ ಜಗತ್ತಿನ ಹಲವು ದೇಶಗಳ ಇಂಧನ ದರದ ಮೇಲೆ ಪರಿಣಾಮ ಬೀರಿದೆ. ಭಾರತವು ರಷ್ಯಾದಿಂದ ಕಡಿಮೆ ದರದಲ್ಲಿ ಇಂಧನ ಖರೀದಿ ಮಾಡುತ್ತಿದ್ದರೂ, ಇದು ಹಲವಾರು ರಾಜಕೀಯ ಬಿಕ್ಕಟ್ಟುಗಳ ನಡುವೆ ನಡೆಯುತ್ತಿದೆ. ಹಾಗಾಗಿ ಇಂಧನ ದರಗಳ ಮೇಲೆ ತಕ್ಷಣಕ್ಕೆ ಇಳಿಕೆ ಅನುಮಾನವಾಗಿ ಕಂಡಿದೆ. ರಾಷ್ಟ್ರ ರಾಜಧಾನಿ, ದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ ಸೇರಿ ದೇಶದ ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನೂ ಕೆಲವು ನಗರಗಳಲ್ಲಿ ಕೊಂಚ ಪ್ರಮಾಣದ ಏರಿಕೆಯಾಗಿದೆ. ಸಾಮಾನ್ಯವಾಗಿ ಪ್ರತಿದಿನ ಬೆಳಗ್ಗೆ 8ಕ್ಕೆ ಇಂಧನ ದರದಲ್ಲಿ ವ್ಯತ್ಯಾಸವಾಗುತ್ತದೆ. ರಾಜ್ಯಗಳಲ್ಲೂ ಕೂಡ, ಸಾಗಣೆ ವೆಚ್ಚಕ್ಕೆ ಅನುಸಾರವಾಗಿ ಜಿಲ್ಲೆಯಿಂದ ಜಿಲ್ಲೆಗೆ ಇಂಧನ ದರಗಳಲ್ಲಿ ವ್ಯತ್ಯಾಸವಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ದರ ಎಷ್ಟಿದೆ ಅನ್ನೋದರ ವಿವರ ಇಲ್ಲಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
Oil Import From Russia: ಭಾರತಕ್ಕೆ ತೈಲ ರಫ್ತು ಮಾಡೋದ್ರಲ್ಲಿ ರಷ್ಯಾನೇ ನಂ.1!
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು:
30,000 ಕೊಟ್ಟರೆ ಎಲೆಕ್ಟ್ರಿಕ್ ಆಗುತ್ತೆ ಪೆಟ್ರೋಲ್ ಸ್ಕೂಟರ್..!
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.