
ವಾಷಿಂಗ್ಟನ್(ಅ.13): ಭಾರತದ ಆರ್ಥಿಕ ಬೆಳವಣಿಗೆ ಪ್ರಮಾಣ ಶೇ.6ಕ್ಕೆ ಕುಸಿಯಲಿದೆ ಎಂದು ವಿಶ್ವಬ್ಯಾಂಕ್ ಆತಂಕ ವ್ಯಕ್ತಪಡಿಸಿದೆ.
ದಕ್ಷಿಣ ಏಷ್ಯಾ ರಾಷ್ಟ್ರಗಳ ಆರ್ಥಿಕತೆಯನ್ನು ಕೇಂದ್ರೀಕರಿಸಿ ವಿಶ್ವಬ್ಯಾಂಕ್ ದ್ವೈವಾರ್ಷಿಕ ವರದಿ ಸಿದ್ಧಪಡಿಸಿದ್ದು, 2018–19ನೇ ವಿತ್ತೀಯ ವರ್ಷದಲ್ಲಿ ಭಾರತದ ಆರ್ಥಿಕ ವೃದ್ಧಿ ದರ ಶೇ 6.9ರಷ್ಟು ದಾಖಲಾಗಿದೆ ಎನ್ನಲಾಗಿದೆ.
ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಜೊತೆಗಿನ ಸಭೆಯ ಹಿನ್ನೆಲೆಯಲ್ಲಿ ವಿಶ್ವಬ್ಯಾಂಕ್ ಈ ವರದಿ ಬಿಡುಗಡೆ ಮಾಡಿದೆ.
2017-18ನೇ ವತ್ತೀಯ ವರ್ಷದಲ್ಲಿ ಶೇ 7.2ರಷ್ಟಿದ್ದ ಆರ್ಥಿಕ ವೃದ್ಧಿ ದರ 2018–19ರಲ್ಲಿ ಶೇ 6.8 ದಾಖಲಾಗಿದೆ. ಉತ್ಪಾದನೆ ಮತ್ತು ನಿರ್ಮಾಣ ಚಟುವಟಿಕೆಗಳು ಚೇತರಿಸಿಕೊಂಡಿರುವುದರಿಂದ ಕೈಗಾರಿಕಾ ಉತ್ಪಾದನೆ ವೃದ್ಧಿ ದರ ಶೇ 6.9ಕ್ಕೆ ಏರಿಕೆ ಕಂಡಿದೆ.
ಕೃಷಿ ಮತ್ತು ಸೇವಾ ವಲಯಗಳಲ್ಲಿನ ವೃದ್ಧಿ ದರ ಕ್ರಮವಾಗಿ ಶೇ 2.9 ಮತ್ತು ಶೇ 7.5ರಷ್ಟಿದೆ ಎಂದು ವಿಶ್ವಬ್ಯಾಂಕ್ ವರದಿ ತಿಳಿಸಿದೆ.
2019–20ರ ಮೊದಲ ತ್ರೈಮಾಸಿಕದಲ್ಲಿ ಬೇಡಿಕೆ ಕುಸಿತದಿಂದಾಗಿ ಕೈಗಾರಿಕೆ ಮತ್ತು ಸೇವಾ ವಲಯದ ಪೂರೈಕೆ ವಲಯ ಕುಂಠಿತ ಕಂಡಿರುವುದಾಗಿ ವಿಶ್ವಬ್ಯಾಂಕ್ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅಕ್ಟೋಬರ್ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.