
ವಾಷಿಂಗ್ಟನ್(ಜ.08): ಅಚ್ಚರಿ ಬೆಳವಣಿಗೆಯಲ್ಲಿ ವಿಶ್ವ ಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎರಡನೇ ಅವಧಿಗೆ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಕಿಮ್ ಅವರ ಅವಧಿ 2022ಕ್ಕೆ ಅಂತ್ಯಗೊಳ್ಳಲಿದೆ. ಆದರೆ ಅವಧಿಗೂ ಮುನ್ನವೇ ಫೆಬ್ರವರಿ 1ರಿಂದ ಜಾರಿಗೆ ಬರುವಂತೆ ಇಂದು ರಾಜೀನಾಮೆ ನೀಡಿದ್ದಾರೆ.
ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಮಹತ್ವದ ಗೌರವವಾಗಿದೆ. ನನ್ನ ಅವಧಿಯಲ್ಲಿ ತೀವ್ರವಾದ ಬಡತನವನ್ನು ಅಂತ್ಯಗೊಳಿಸಲು ಯತ್ನಿಸಿದ್ದೇನೆ ಎಂದು ಕಿಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಬ್ಯಾಂಕ್ ಸಿಇಒ ಕ್ರಿಸ್ಟಲಿನಾ ಜಾರ್ಜಿವಾ ಅವರು ಫೆಬ್ರವರಿ 1ರಂದು ಮಧ್ಯಂತರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.