ರಾಷ್ಟ್ರೀಯ ನೇಮಕಾತಿ ಏಜೆನ್ಸಿಗೆ ಒಪ್ಪಿಗೆ ನೀಡಿದ ಬೆನ್ನಲ್ಲೇ ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ

By Suvarna News  |  First Published Aug 24, 2020, 8:16 PM IST

ಸಾಮಾನ್ಯ ಅರ್ಹತಾ ಪರೀಕ್ಷೆ' (ಸಿಇಟಿ)  ನಡೆಸಲು ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪಿಸಲು ಅನುಮತಿ ನೀಡಿದ್ದೇ ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.


ನವದೆಹಲಿ, (ಆ.24): ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಮೂಲಕ ದೇಶದ 700 ಜಿಲ್ಲೆಗಳಲ್ಲಿ 1 ಸಾವಿರ ಸೆಂಟರ್ ಗಳಲ್ಲಿ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ಪ್ರತಿಯೊಂದು ಜಿಲ್ಲೆಯಲ್ಲಿಯೂ ಸೆಂಟರ್ ಮಾಡಲಾಗುವುದು. ದೇಶದಲ್ಲಿ 700 ಜಿಲ್ಲೆಗಳಿದ್ದು, ಒಟ್ಟು ಒಂದು ಸಾವಿರ ಸೆಂಟರ್ ತೆರೆಯಲಾಗುವುದು ಎಂದು ಹೇಳಿದರು.

Tap to resize

Latest Videos

undefined

ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಅಡಿಯಲ್ಲಿ ಸಿಇಟಿಯನ್ನು 12 ಭಾಷೆಗಳಲ್ಲಿ ನಡೆಸಲಾಗುವುದು ನಂತರ ಇನ್ನಷ್ಟು ಹೆಚ್ಚು ಭಾಷೆಗಳನ್ನು ಸೇರಿಸುವುದಾಗಿ ತಿಳಿಸಿದರು.

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ

ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಅಭ್ಯರ್ಥಿಗಳನ್ನು ಮಾಡಲು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಆನ್ ಲೈನ್ ನಲ್ಲಿ ನಡೆಸುವುದು ಕಡ್ಡಾಯ ಎಂದು ರಾಷ್ಟ್ರೀಯ ನೇಮಕಾತಿ ಏಜೆನ್ಸಿ ತಿಳಿಸಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಹುದ್ದೆಗಾಗಿ ಅಭ್ಯರ್ಥಿಗಳ ನೇಮಕಾತಿಗೆ ಆನ್ ಲೈನ್ ನಲ್ಲಿ ಸಿಇಟಿ ನಡೆಸಲು ಎನ್ ಆರ್ ಎಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿಸಿತ್ತು.

 ಉದ್ಯೋಗ ಹುಡುಕುವವರಿಗೆ ಒಂದೇ ಸಾಮಾನ್ಯ ಪರೀಕ್ಷೆ ನಡೆಸುವ ಮೂಲಕ ಹಣ ಉಳಿತಾಯ ಹಾಗೂ ಹಲವಾರು ಪರೀಕ್ಷೆಗಳನ್ನು ಬರೆಯುವುದನ್ನು ತಪ್ಪಿಸಿದಂತಾಗಿದೆ. ಯುವಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದೇಶಾದ್ಯಂತ ಸೆಂಟರ್ ಗಳನ್ನು ತೆರೆಯಲಾಗುವುದು, ಇದರಲ್ಲಿ ಮುಖ್ಯವಾಗಿ ಗ್ರಾಮೀಣ ಮತ್ತು ಕುಗ್ರಾಮ ಪ್ರದೇಶದಲ್ಲಿರುವ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

click me!