AAI RECRUITMENT 2022: ವಿವಿಧ 596 ಹುದ್ದೆಗಳಿಗೆ ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ

By Gowthami KFirst Published Dec 11, 2022, 4:55 PM IST
Highlights

ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.  ಜೂನಿಯರ್ ಎಕ್ಸಿಕ್ಯೂಟಿವ್ ಸೇರಿ ವಿವಿಧ 596 ಖಾಲಿ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಜನವರಿ 21  ಕೊನೆಯ ದಿನವಾಗಿರುತ್ತದೆ. 

ನವದೆಹಲಿ (ಡಿ.11): ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.  ಜೂನಿಯರ್ ಎಕ್ಸಿಕ್ಯೂಟಿವ್ ಸೇರಿ ವಿವಿಧ 596 ಖಾಲಿ ಹುದ್ದೆಗಳು ಖಾಲಿ ಇದ್ದು,  ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು   ನೇಮಕಾತಿ ಅಧಿಸೂಚನೆಯಲ್ಲಿ ಸೂಚಿಸಲಾದ ಎಲ್ಲಾ ಅರ್ಹತಾ ಮಾನದಂಡಗಳನ್ನು ಸರಿಯಾಗಿಒ ಓದಿಕೊಳ್ಳಬೇಕು.  ಡಿಸೆಂಬರ್ 22 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಜನವರಿ 21 ಅರ್ಜಿ ಸಲಿಸಲು ಕೊನೆಯ ದಿನವಾಗಿರುತ್ತದೆ. 

ಒಟ್ಟು 596 ಹುದ್ದೆಗಳ ಮಾಹಿತಿ ಇಂತಿದೆ:
ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್- ಸಿವಿಲ್): 62 ಹುದ್ದೆಗಳು
ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್-ಎಲೆಕ್ಟ್ರಿಕಲ್): 84 ಹುದ್ದೆಗಳು
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್): 440 ಹುದ್ದೆಗಳು
ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್): 10 ಹುದ್ದೆಗಳು

ಶೈಕ್ಷಣಿಕ ವಿದ್ಯಾಭ್ಯಾಸ: ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. 
ಜೂನಿಯರ್ ಎಕ್ಸಿಕ್ಯೂಟಿವ್ (ಸಿವಿಲ್) ಹುದ್ದೆಗೆ ಸಿವಿಲ್‌ನಲ್ಲಿ ಎಂಜಿನಿಯರಿಂಗ್ / ಟೆಕ್ನಾಲಜಿ ಪದವಿ ಹೊಂದಿರಬೇಕು.
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್) ಹುದ್ದೆಗೆ ಎಲೆಕ್ಟ್ರಿಕಲ್‌ನಲ್ಲಿ ಎಂಜಿನಿಯರಿಂಗ್ / ಟೆಕ್ನಾಲಜಿ ಪದವಿ ಹೊಂದಿರಬೇಕು.
ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) ಹುದ್ದೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್ / ಟೆಲಿಕಮ್ಯುನಿಕೇಶನ್ / ಎಲೆಕ್ಟ್ರಿಕಲ್‌ನಲ್ಲಿ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.
ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್)  ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಆರ್ಕಿಟೆಕ್ಚರ್‌ನಲ್ಲಿ ಪದವಿಯನ್ನು ಹೊಂದಿರಬೇಕು ಮತ್ತು ಕೌನ್ಸಿಲ್ ಆಫ್ ಆರ್ಕಿಟೆಕ್ಟ್ಸ್‌ನಲ್ಲಿ ನೋಂದಾಯಿಸಿರಬೇಕು.

ವಯೋಮಿತಿ: ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿಯು 27 ವರ್ಷಗಳಿಗಿಂತ ಹೆಚ್ಚಿರಬಾರದು. 

ವೇತನ ವಿವಿರ:  ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ 40000  ದಿಂದ 140000 ರ ನಡುವೆ ಇರುತ್ತದೆ.

SBI SCO Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 39 ಹುದ್ದೆಗಳಿಗೆ

ಪೋಸ್ಟ್‌ಗೆ ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಯು ಜಾಹೀರಾತಿನಲ್ಲಿ ತಿಳಿಸಲಾದ ಅರ್ಹತೆ ಮತ್ತು ಇತರ ಮಾನದಂಡಗಳನ್ನು   ಖಚಿತಪಡಿಸಿಕೊಳ್ಳಬೇಕು.  ಸುಳ್ಳು ಮಾಹಿತಿಯನ್ನು ಒದಗಿಸುವುದು ಅನರ್ಹತೆಯಾಗಿದೆ ಮತ್ತು ಅಂತಹ ಸುಳ್ಳು ಮಾಹಿತಿಯನ್ನು ಒದಗಿಸುವ ಯಾವುದೇ ಪರಿಣಾಮಗಳಿಗೆ AAI ಜವಾಬ್ದಾರನಾಗಿರುವುದಿಲ್ಲ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಎಚ್ಚರಿಕೆಯಿಂದ ಓದಲು ಸಲಹೆ ನೀಡಲಾಗುತ್ತದೆ ಮತ್ತು ಎಲ್ಲಾ ಸೂಚನೆಗಳನ್ನು ಆನ್‌ಲೈನ್ ಅಪ್ಲಿಕೇಶನ್‌ನ ಮುಖ್ಯ ಸೂಚನಾ ಪುಟದಲ್ಲಿ ನೀಡಲಾಗಿದೆ.

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌: ಕೇಂದ್ರದಿಂದ ನಾಳೆ ಅಪ್ರೆಂಟಿಸ್‌ ಮೇಳ..!

ಅಭ್ಯರ್ಥಿಗಳು AAI ನ ಅಧಿಕೃತ ವೆಬ್‌ಸೈಟ್‌ನಲ್ಲಿ "CAREERS" ಟ್ಯಾಬ್ ಅಡಿಯಲ್ಲಿ ಲಭ್ಯವಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಯಾವುದೇ ಸಂದರ್ಭಗಳಲ್ಲಿ ಅರ್ಜಿಗಳನ್ನು ಸಲ್ಲಿಸುವ ಇತರ ವಿಧಾನವನ್ನು ಸ್ವೀಕರಿಸಲಾಗುವುದಿಲ್ಲ. ಅಪೂರ್ಣ ಅರ್ಜಿಗಳನ್ನು  ತಿರಸ್ಕರಿಸಲಾಗುತ್ತದೆ. ಅಭ್ಯರ್ಥಿಯು ಮಾನ್ಯವಾದ ವೈಯಕ್ತಿಕ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. AAI ನಿಂದ ಯಾವುದೇ ಸಂವಹನಕ್ಕಾಗಿ ಅಭ್ಯರ್ಥಿಗಳು ತಮ್ಮ ಇ-ಮೇಲ್/AAI ನ ವೆಬ್‌ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸಲು ವಿನಂತಿಸಲಾಗಿದೆ

click me!