ಶಾಲಾ-ಕಾಲೇಜು ಪ್ರಾರಂಭಕ್ಕೆ ಅನುಮತಿ: 8 ಸಾವಿರ ಶಿಕ್ಷಕರ ನೇಮಕಾತಿ

By Suvarna News  |  First Published Oct 7, 2020, 3:28 PM IST

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಇಷ್ಟು ದಿನ ಬಂದ್ ಆಗಿದ್ದ ಶೈಕ್ಷಣ ಕ್ಷೇತ್ರವನ್ನು ಹಂತ-ಹಂತವಾಗಿ ತೆರೆಯಲು ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ 8000 ಶಿಕ್ಷಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.


ನವದೆಹಲಿ, (ಅ.07):  ಇದೇ ಅಕ್ಟೋಬರ್ 15 ಬಳಿಕ ಹಂತ-ಹಂತವಾಗಿ ಶಾಲಾ-ಕಾಲೇಜು ಪ್ರಾರಂಭಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಇದಕ್ಕೆ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ.

ಕೊರೋನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಶೈಕ್ಷಣಿಕ ಕ್ಷೇತ್ರಕ್ಕೆ ಹಂತ-ಹಂತವಾಗಿ ಚೇತರಿ ಕೊಡಲು ಕೇಂದ್ರ ಮುಂದಾಗಿದೆ. ಇದರ ಬೆನ್ನಲ್ಲೇ ದೇಶದಾದ್ಯಂತ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವಂತ 8000 ವಿವಿಧ ವಿಷಯಗಳ ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 

Latest Videos

undefined

ಈ ಕುರಿತಂತೆ ಆರ್ಮಿ ಪಬ್ಲಿಕ್ ಶಾಲೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ದಿನಾಂಕ 20-10-2020ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

 ಸಿ ಬಿ ಎಸ್ ಇ ನಿಂದ ಅನುಮೋದನೆಗೊಂಡಂತ 137 ಆರ್ಮಿ ಪಬ್ಲಿಕ್ ಶಾಲೆಗಳು ದೇಶದ ವಿವಿಧ ಪ್ರದೇಶಗಳಲ್ಲಿ ಇದ್ದಾವೆ. ಇಂತಹ ಶಾಲೆಗಳಲ್ಲಿ ಖಾಲಿ ಇರುವಂತ 8000 ಶಿಕ್ಷಕರ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. 

ಜಾಬ್ಸ್ ಹಾಗೂ ಶಿಕ್ಷಣ ಕ್ಷೇತ್ರದ ಮಾಹಿತಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಬಿ.ಎಸ್ಸಿ, ಬಿಸಿಎ, ಎಂಸಿಎ, ಎಂಎಸ್ಸಿ, ಪದವಿ, ಗ್ರಾಜುಯೇಷನ್, ಬಿಎ ಬಿ.ಎಡ್, ಬಿಎಸ್ಸಿ ಬಿ.ಎಡ್, ಡಿ.ಎಡ್, ಬಿ.ಎಡ್ ಪದವಿ ಪಡೆದಿರಬೇಕು.

ವಯೋಮಿತಿ: ಗರಿಷ್ಠ 40, ಕನಿಷ್ಠ 57 ವರ್ಷ

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ

ಅರ್ಜಿ ಶುಲ್ಕ: 500ರೂ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು http://aps-csb.in/Candidate/GeneralInstructions.aspx ಈ ಲಿಂಕ್ ಕ್ಲಿಕ್ ಮಾಡಿ

click me!