ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಫೆಬ್ರವರಿ 11 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಜ.30): ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ (Bhabha Atomic Research Center) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಗ್ರೂಪ್ ಎ (ಸೈಂಟಿಫಿಕ್ ಆಫೀಸರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಫೆಬ್ರವರಿ 11 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ barc.gov.in ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ ಗ್ರೂಪ್ ಎ(ಸೈಂಟಿಫಿಕ್ ಆಫೀಸರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಬಿಎಸ್ಸಿ ವಿದ್ಯಾರ್ಹತೆ ಪಡೆದಿರಬೇಕು.
undefined
ವಯೋಮಿತಿ: ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ ಸೈಂಟಿಫಿಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗಾನುಸಾರ ವಯೋಮಿತಿ ನೀಡಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳು- ಗರಿಷ್ಠ 26 ವರ್ಷ
ಒಬಿಸಿ ಅಭ್ಯರ್ಥಿಗಳು- ಗರಿಷ್ಠ 29 ವರ್ಷ
SC/ST ಅಭ್ಯರ್ಥಿಗಳು- ಗರಿಷ್ಠ 31 ವರ್ಷ
EPFO Recruitment 2022: ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ: ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ ಸೈಂಟಿಫಿಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಮಾಸಿಕ ವೇತನ: ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ ಸೈಂಟಿಫಿಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 55,000 ರೂ ಸ್ಟೆಫಂಡ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಬಾಬಾ ಆಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಖಾಲಿ ಇರುವ ಸೈಂಟಿಫಿಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 11, 2022
ಆನ್‌ಲೈನ್ ಪರೀಕ್ಷೆಯ ಸ್ಲಾಟ್ ಬುಕಿಂಗ್: ಮಾರ್ಚ್ 4 ರಿಂದ ಮಾರ್ಚ್ 18, 2022
ಆನ್‌ಲೈನ್ ಪರೀಕ್ಷೆ: ಏಪ್ರಿಲ್ 7 ರಿಂದ ಏಪ್ರಿಲ್ 13, 2022
ಅಭ್ಯರ್ಥಿಗಳು GATE ಸ್ಕೋರ್ ಅಪ್‌ಲೋಡ್ ಮಾಡಲು ಕೊನೆಯ ದಿನಾಂಕ: ಏಪ್ರಿಲ್ 13, 2022
South Western Railway Recruitment 2022: ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಸುವರ್ಣವಕಾಶ
ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗೆ ನೇರ ನೇಮಕಾತಿ: ಭಾರತೀಯ ಉಕ್ಕು ಪ್ರಾಧಿಕಾರ (Steel Authority of India- SAIL) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ . ಸ್ಪೆಷಲಿಸ್ಟ್ ಮತ್ತು ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಸೇರಿ ಒಟ್ಟು 24 ಹುದ್ದೆಗಳು ಖಾಲಿ ಇದ್ದು, ಎಂಬಿಬಿಎಸ್, ಎಂಎಸ್, ಎಂಡಿ ಪೂರ್ಣಗೊಳಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 9 ರಿಂದ 11 ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ (Walk-in-Interview)ಭಾಗವಹಿಸಲು ಅಧಿಸೂಚನೆಯಲ್ಲಿ ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಉಕ್ಕು ಪ್ರಾಧಿಕಾರ (SAIL)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಕಾಲೇಜಿನಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಎಸ್, ಎಂಡಿ ಪೂರ್ಣಗೊಳಿಸಿರಬೇಕು.
ಸ್ಪೆಷಲಿಸ್ಟ್ ಹುದ್ದೆಗಳಿಗೆ ಪಿಜಿ ಡಿಪ್ಲೋಮಾ/ ಪದವಿ, ಎಂಬಿಬಿಎಸ್ ಪದವಿ ಮತ್ತು
ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಎಂಬಿಬಿಎಸ್ ಪದವಿ ಮಾಡಿರಬೇಕು.
ಸಂದರ್ಶನ ನಡೆಯುವ ಸ್ಥಳ:
ED ಕಚೇರಿ (M&HS)
DSP ಮುಖ್ಯ ಆಸ್ಪತ್ರೆ ದುರ್ಗಾಪುರ- 713205
ಪಶ್ಚಿಮ್ ಬರ್ಧಮಾನ್