BARC Recruitment 2022: ಭಾಭಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Feb 11, 2022, 5:09 PM IST

ಭಾಭಾ ಪರಮಾಣು ಸಂಶೋಧನಾ ಕೇಂದ್ರ  ಗ್ರೂಪ್ ಎ ಹುದ್ದೆಗಳಿಗೆ ವೃತ್ತಿಪರರನ್ನು ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ. ಫೆಬ್ರವರಿ 21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಬೆಂಗಳೂರು(ಫೆ.11): ಭಾಭಾ ಪರಮಾಣು ಸಂಶೋಧನಾ ಕೇಂದ್ರ (Bhabha Atomic Research Cente - BARC) ಗ್ರೂಪ್ ಎ ಹುದ್ದೆಗಳಿಗೆ ವೃತ್ತಿಪರರನ್ನು ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ. ವೈಜ್ಞಾನಿಕ ಅಧಿಕಾರಿ (Scientific Officers) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು,  GATE 2022 ಸ್ಕೋರ್ ಮೂಲಕ  ಈ ಹುದ್ದೆಗಳಿಗೆ ಆರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫೆಬ್ರವರಿ 21, 2022 ರವರೆಗೆ   ವಿಸ್ತರಣೆ ಮಾಡಲಾಗಿದೆ. ಅಸಕ್ತರು https://barconlineexam.in/ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆಸಕ್ತರು ಅಧಿಕೃತ ವೆಬ್‌ಸೈಟ್‌ http://barc.gov.in/ ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಭಾಭಾ ಪರಮಾಣು ಸಂಶೋಧನಾ ಕೇಂದ್ರ  ಗ್ರೂಪ್ ಎ ಸೈಂಟಿಫಿಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಬಿಎಸ್ಸಿ ಪೂರ್ಣಗೊಳಿಸಿರಬೇಕು. 5-ವರ್ಷದ ಇಂಟಿಗ್ರೇಟೆಡ್ M.Tech. ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಲಾದ ಒಂಬತ್ತು ಎಂಜಿನಿಯರಿಂಗ್ ವಿಭಾಗಗಳಲ್ಲಿ ಒಂದರಲ್ಲಿ ಕನಿಷ್ಠ 60%   ಅಂಕಗಳನ್ನು ಪಡೆದಿರಬೇಕು.

Tap to resize

Latest Videos

undefined

ವಯೋಮಿತಿ: ಭಾಭಾ ಪರಮಾಣು ಸಂಶೋಧನಾ ಕೇಂದ್ರ  ಗ್ರೂಪ್ ಎ ಸೈಂಟಿಫಿಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ವರ್ಗಾನುಸಾರ ವಯೋಮಿತಿ ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳು- ಗರಿಷ್ಠ 26 ವರ್ಷ
ಒಬಿಸಿ ಅಭ್ಯರ್ಥಿಗಳು- ಗರಿಷ್ಠ 29 ವರ್ಷ
SC/ST ಅಭ್ಯರ್ಥಿಗಳು- ಗರಿಷ್ಠ 31 ವರ್ಷ 

EAST COAST RAILWAY APPRENTICE RECRUITMENT 2022: ಬರೋಬ್ಬರಿ 756 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:  ಭಾಭಾ ಪರಮಾಣು ಸಂಶೋಧನಾ ಕೇಂದ್ರ  ಗ್ರೂಪ್ ಎ ಸೈಂಟಿಫಿಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಭಾಭಾ ಪರಮಾಣು ಸಂಶೋಧನಾ ಕೇಂದ್ರ  ಗ್ರೂಪ್ ಎ ಸೈಂಟಿಫಿಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ಭಾಭಾ ಪರಮಾಣು ಸಂಶೋಧನಾ ಕೇಂದ್ರ  ಗ್ರೂಪ್ ಎ ಸೈಂಟಿಫಿಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ   ಅಭ್ಯರ್ಥಿಗಳಿಗೆ ಮಾಸಿಕ 55,000 ಸ್ಟೆಫಂಡ್ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು: 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 11, 2022
ಆನ್‌ಲೈನ್ ಪರೀಕ್ಷೆಯ ಸ್ಲಾಟ್ ಬುಕಿಂಗ್ ಮಾರ್ಚ್ 4, 2022 ರಿಂದ ಮಾರ್ಚ್ 18, 2022
ಆನ್‌ಲೈನ್ ಪರೀಕ್ಷೆ ಏಪ್ರಿಲ್ 7, 2022 ರಿಂದ ಏಪ್ರಿಲ್ 13, 2022 ರವರೆಗೆ
ಗೇಟ್ ಸ್ಕೋರ್ ಅನ್ನು ಅಪ್‌ಲೋಡ್ ಮಾಡಲು ಕೊನೆಯ ದಿನಾಂಕ ಏಪ್ರಿಲ್ 13, 2022

Central Bank of India Recruitment 2022: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮ್ಯಾನೇಜ್​ಮೆಂಟ್ ಟ್ರೇನಿ ಸೇರಿ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. (Hindustan Aeronautics Limited-HAL) ಕಂಪನಿಯು ಖಾಲಿ ಇರುವ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜ್​ಮೆಂಟ್ ಟ್ರೇನಿ (Management Trainee) ಮತ್ತು ಡಿಸೈನ್ ಟ್ರೇನಿ (Design Trainee) ಸೇರಿ ಒಟ್ಟು 85 ಹುದ್ದೆಗಳು ಖಾಲಿ ಇದೆ.  ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 2ರೊಳಗೆ  ಅರ್ಜಿ ಸಲ್ಲಿಸಬೇಕು. ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://hal-india.co.in/  ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆ : ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ  ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ   ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.hal-india.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್​​ 2,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

click me!