BECIL Recruitment 2022: ನರ್ಸಿಂಗ್ ಟ್ಯೂಟರ್ ಹುದ್ದೆಗೆ ಬಿಇಸಿಐಎಲ್‌ ನೇಮಕಾತಿ

By Suvarna News  |  First Published Mar 11, 2022, 11:04 PM IST

ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್   2 ನರ್ಸಿಂಗ್ ಟ್ಯೂಟರ್  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು,   ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದೆ. 


ಬೆಂಗಳೂರು(ಮಾ.11): ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (Broadcast Engineering Consultants India Limited) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.  ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ನರ್ಸಿಂಗ್ ಟ್ಯೂಟರ್ (Nursing Tutor)  ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ www.becil.com ಆಸಕ್ತರು ಭೇಟಿ ನೀಡಬಹುದು. 

ಶೈಕ್ಷಣಿಕ ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್  ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ  ಬಿಎಸ್‌ಸಿ, ಡಿಪ್ಲೊಮಾ,  ಸಿಸ್ಟರ್ ಟ್ಯೂಟರ್ ಕೋರ್ಸ್‌ ಮಾಡಿರಬೇಕು.  ಸ್ಟಾಫ್ ನರ್ಸ್  ಅಥವಾ ಹೋಮ್ ಸಿಸ್ಟರ್ ಆಗಿ  ಐದು ವರ್ಷಗಳ ಪ್ರಾಯೋಗಿಕ ಅನುಭವ ಹೊಂದಿರಬೇಕು.

Tap to resize

Latest Videos

undefined

ವಯೋಮಿತಿ: ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್  ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30.  ಸರಕಾರದ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

HPCL RECRUITMENT 2022: ಒಟ್ಟು 25 ಮ್ಯಾನೇಜರ್ ಹುದ್ದೆಗಳಿಗೆ ಹೆಚ್‌ಪಿಸಿಎಲ್‌ ನೇಮಕಾತಿ

ಆಯ್ಕೆ ಪ್ರಕ್ರಿಯೆ: ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್  ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್  ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ OBC/ ಮಾಜಿ ಸೈನಿಕ ಮತ್ತು ಮಹಿಳಾ  ಅಭ್ಯರ್ಥಿಗಳು ₹750 ಹಾಗೂ SC / ST / EWS / PH ಅಭ್ಯರ್ಥಿಗಳು ₹450 ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ವೇತನ: ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್  ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹38,000 ರೂ ವೇತನ ದೊರೆಯಲಿದೆ.

KPSC Recruitment 2022: ಔಷಧ ವಿಶ್ಲೇಷಕರು ಹುದ್ದೆಗಳಿಗೆ ಕೆಪಿಎಸ್‌ಸಿ ನೇಮಕಾತಿ 

ಆಹಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ: ಸರ್ಕಾರಿ ಸ್ವಾಮ್ಯದ ಭಾರತೀಯ ಆಹಾರ ನಿಗಮ-ಎಫ್‌ಸಿಐ (Food Corporation of India - FCI) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭಿಸಿದೆ. ವಿವಿಧ ಮ್ಯಾನೆಜೇರಿಯಲ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಮಾರ್ಚ್ 31ಕ್ಕೂ ಮೊದಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ್ ವೆಬ್‌ ತಾಣ https://fci.gov.in/ ಗೆ ಭೇಟಿ ನೀಡಬಹುದು.

ಸಹಾಯಕ ಜನರಲ್ ಮ್ಯಾನೇಜರ್ (Assistant General Manager-Administration), ಸಹಾಯಕ ಜನರಲ್ ಮ್ಯಾನೇಜರ್ (Technical), ಸಹಾಯಕ ಜನರಲ್ ಮ್ಯಾನೇಜರ್ (Accounts), ಸಹಾಯಕ ಜನರಲ್ ಮ್ಯಾನೇಜರ್ (Law) ಮತ್ತು ಮೆಡಿಕಲ್ ಆಫಿಸರ್ (Medical Officer) ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ವಿವಿಧ ಮ್ಯಾನೆಜೇರಿಯಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರ ವಿದ್ಯಾಬ್ಯಾಸ ಪಡೆದಿರಬೇಕು.

ಜನರಲ್ ಅಡ್ಮಿನಿಸ್ಟ್ರೇಷನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಅಥವಾ ACA /
AICWA/ ACS ಅಥವಾ ಕಾನೂನಿನಲ್ಲಿ 55% ಅಂಕಗಳೊಂದಿಗೆ  ಸ್ನಾತಕೋತ್ತರ ಪದವಿ ಮಾಡಿರಬೇಕು.

ಟೆಕ್ನಿಕಲ್ ಜನರಲ್ ಅಡ್ಮಿನಿಸ್ಟ್ರೇಷನ್ ಮ್ಯಾನೇಜರ್ ಹುದ್ದೆಗೆ ಕೃಷಿಯಲ್ಲಿ 55% ಅಂಕಗಳೊಂದಿಗೆ ಬಿ.ಎಸ್ಸಿ ಅಥವಾ ಆಹಾರ ವಿಜ್ಞಾನ / ಆಹಾರ ತಂತ್ರಜ್ಞಾನ / ಆಹಾರ ಸಂಸ್ಕರಣೆಯಲ್ಲಿ 55% ಅಂಕಗಳೊಂದಿಗೆ BE / B.Tech ಅಥವಾ ಕೃಷಿ ಎಂಜಿನಿಯರಿಂಗ್‌ನಲ್ಲಿ  55% ಅಂಕಗಳೊಂದಿಗೆ  B.Tech/ BE ಅಥವಾ
ಬಯೋ-ಟೆಕ್ನಾಲಜಿ / ಬಯೋ-ಕೆಮಿಕಲ್ / ಅಗ್ರಿಕಲ್ಚರಲ್ ಬಯೋ-ಟೆಕ್ನಾಲಜಿಯಲ್ಲಿ 55% ಅಂಕಗಳೊಂದಿಗೆ ಬಿಇ / ಬಿ.ಟೆಕ್.

ಅಕೌಂಟ್ಸ್ ಜನರಲ್ ಅಡ್ಮಿನಿಸ್ಟ್ರೇಷನ್ ಮ್ಯಾನೇಜರ್ ಹುದ್ದೆಗೆ ಚಾರ್ಟರ್ಡ್ ಅಕೌಂಟೆಂಟ್ / ಕಾಸ್ಟ್ ಅಕೌಂಟೆಂಟ್ಸ್ / ಕಂಪನಿ ಸೆಕ್ರೆಟರಿ ಸದಸ್ಯತ್ವ ಪಡೆದಿರಬೇಕು.

ಕಾನೂನು ಜನರಲ್ ಅಡ್ಮಿನಿಸ್ಟ್ರೇಷನ್ ಮ್ಯಾನೇಜರ್ ಹುದ್ದೆಗೆ 5 ವರ್ಷಗಳ ಅನುಭವದೊಂದಿಗೆ ಕಾನೂನಿನಲ್ಲಿ ಪೂರ್ಣ ಸಮಯದ ಪದವಿ ಪಡೆದಿರಬೇಕು.

ಮೆಡಿಕಲ್ ಆಫಿಸರ್ ಹುದ್ದೆಗೆ 3 ವರ್ಷಗಳ ಅನುಭವದೊಂದಿಗೆ ಎಂಬಿಬಿಎಸ್ ಮಾಡಿರಬೇಕು. 

click me!