
ಬೆಂಗಳೂರು(ಜ.1): ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿ. (Broadcast Engineering Consultants India Limited) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1 ಸೋಷಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ (Social Media Executive) ಮತ್ತು 1 ಸ್ಟಾರ್ಟ್ ಅಪ್ ಫೆಲೋ (Start-up Fellow) ಹುದ್ದೆ ಖಾಲಿ ಇದ್ದು ಆನ್‌ಲೈನ್ (online) ಮೂಲಕ ಅರ್ಜಿ ಸಲ್ಲಿಸಲು ಜನವರಿ 21 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://www.becil.com/vacancies ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: BECILನಲ್ಲಿ ಖಾಲಿ ಇರುವ ಸೋಷಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಸಂವಹನ ಮತ್ತು ಪತ್ರಿಕೋದ್ಯಮ/ ಪಬ್ಲಿಕ್ ರಿಲೇಶನ್ಸ್ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಮತ್ತು ಸ್ಟಾರ್ಟ್ ಅಪ್ ಫೆಲೋ ಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಇಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಬ್ಯಾಚುಲರ್ ಪದವಿಯನ್ನು ಪೂರ್ಣಗೊಳಿಸಿರಬೇಕು ಜೊತೆಗೆ ಇಂಜಿನಿಯರಿಂಗ್/ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವೇತನ ಮತ್ತು ವಯೋಮಿತಿ: BECILನಲ್ಲಿ ಖಾಲಿ ಇರುವ ಸೋಷಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 36,000 ದಿಂದ 50,000 ವೇತನ ನಿಗದಿಯಾಗಿದೆ.
Land Surveyor Recruitment 2022: 3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ
ಅರ್ಜಿ ಶುಲ್ಕ ಮತ್ತು ಉದ್ಯೋಗ ಸ್ಥಳ:
ಸಾಮಾನ್ಯ/ಒಬಿಸಿ/ ಮಹಿಳಾ/ ಮಾಜಿ ಸೈನಿಕ- 750 ರೂ. ಅರ್ಜಿ ಶುಲ್ಕ
SC/ST/EWS/PH ಅಭ್ಯರ್ಥಿಗಳಿಗೆ - 450 ರೂ.ಅರ್ಜಿ ಶುಲ್ಕ
ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಪ್ರದೇಶದ ನೋಯ್ಡಾದಲ್ಲಿ ಉದ್ಯೋಗ ಮಾಡಬೇಕಾಗುತ್ತದೆ.
BSNL ನಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (Bharath Sanchar Nigam Limited-BSNL), ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಶುರು ಮಾಡಿದೆ. ಒಟ್ಟು 12 ಗ್ರಾಜುಯೇಟ್ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ (Diploma Apprentice) ಹುದ್ದೆಗಳು ಖಾಲಿ ಇದ್ದು, ಈ ಅಪ್ರೆಂಟಿಸ್ ಹುದ್ದೆಗಳಿಗೆ ಡಿಸೆಂಬರ್ 29ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಹರು ಹಾಗೂ ಸೂಕ್ತ ಅಭ್ಯರ್ಥಿಗಳು ಜನವರಿ 20, 2022ರಂದು ಅರ್ಜಿ ಸಲ್ಲಿಸಬಹುದಾಗಿದೆ. ಬಿಎಸ್‌ಎನ್‌ಎಲ್, ಜಮ್ಮು, ಶ್ರೀನಗರದಲ್ಲಿ ನೇಮಕಾತಿಗೆ ಈ ಬಾರಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅಧಿಕೃತ ಪೋರ್ಟಲ್ www.mhrdnats.gov.in ಅಥವಾ https://bsnl.co.in/ ಗೆ ಭೇಟಿ ನೀಡಿ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ತಮ್ಮನ್ನು ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯ (Ministry of Human Resource Development) ಪೋರ್ಟಲ್ mhrdnats.gov.in ನಲ್ಲಿ ನೋಂದಾಯಿಸಿಕೊಳ್ಳಬೇಕು. ಜಮ್ಮು, ಶ್ರೀನಗರ ಟೆಲಿಕಾಂ ಸರ್ಕಲ್, ಇಂಜಿನಿಯರಿಂಗ್/ ಟೆಕ್ನಾಲಜಿ ಕ್ಷೇತ್ರದಲ್ಲಿ (ಎಲೆಕ್ಟ್ರಾನಿಕ್ಸ್/ ಇ& ಟಿಸಿ/ ಕಂಪ್ಯೂಟರ್/ ಐಟಿ) ಡಿಪ್ಲೋಮಾ ವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಹೊಂದಿರುವವರನ್ನು ಒಂದು ವರ್ಷದ ಅವಧಿಗೆ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ನೇಮಕ ಮಾಡಿಕೊಳ್ಳಲಿದೆ. ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷವಿರುತ್ತದೆ.
ವಯೋಮಿತಿ: ಗ್ರಾಜುಯೇಟ್ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 31/ 01/ 2022 ತಕ್ಕಂತೆ 25 ವರ್ಷ ಮೀರಿರಬಾರದು.
MYSURU UDYOGA MELA: ಮೈಸೂರಿನಲ್ಲಿ ಜನವರಿ 4 ರಿಂದ ಉದ್ಯೋಗ ಮೇಳ
ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಗ್ರಾಜುಯೇಟ್ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಶಾರ್ಟ್ಲಿಸ್ಟಿಂಗ್, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. ಮತ್ತು ಜಮ್ಮು ಕಾಶ್ಮೀರದ ಜಮ್ಮು ಮತ್ತು ಶ್ರೀನಗರದಲ್ಲಿ ಉದ್ಯೋಗ ನೀಡಲಾಗುತ್ತದೆ.