BEL Jobs: ಎಂಜಿನಿಯರಿಂಗ್ ಉದ್ಯೋಗ, ನಿವೃತ್ತ ಸೈನಿಕರಿಂದ ಅರ್ಜಿ ಆಹ್ವಾನ

Suvarna News   | Asianet News
Published : Nov 27, 2021, 04:41 PM IST
BEL Jobs: ಎಂಜಿನಿಯರಿಂಗ್ ಉದ್ಯೋಗ, ನಿವೃತ್ತ ಸೈನಿಕರಿಂದ ಅರ್ಜಿ ಆಹ್ವಾನ

ಸಾರಾಂಶ

ಸಾರ್ವಜನಿಕ ವಲಯದ ಪ್ರಮುಖ ಉದ್ದಿಮೆಯಾಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿ. ( Bharath Electronics Limited) 20 ಹಿರಿಯ ಸಹಾಯಕ ಅಸಿಸ್ಟಂಟ್ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭಿಸಿದೆ. ನಿವೃತ್ತ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 11 ಕೊನೆಯ ದಿನವಾಗಿದೆ.

ಸರ್ಕಾರಿ ಸ್ವಾಮ್ಯದಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ( Bharath Electronics Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. 20 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ  ಪರಿಶೀಲಿಸಬಹುದು. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಡಿಸೆಂಬರ್ 11 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. BLE ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಇರುವವರು ಅರ್ಜಿ ಸಲ್ಲಿಸಬಹುದು. ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಹತೆಯನ್ನು ಹೊಂದಿರುವ ಮಾಜಿ ಸೈನಿಕ ಅಭ್ಯರ್ಥಿಗಳೂ ಅರ್ಜಿಯನ್ನು ಸಲ್ಲಿಸಬಹುದು. ನೌಕಾಪಡೆ, ವಾಯುಪಡೆ, ಸೇನೆ ಅಥವಾ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿಯಿಂದ ನಿವೃತ್ತಿ ಹೊಂದಿದ ಮಾಜಿ ಸೈನಿಕರಾಗಿರುವ ಅಭ್ಯರ್ಥಿಗಳು ಅಥವಾ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು 3 ವರ್ಷಗಳ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ, ಸಂವಹನ, ದೂರಸಂಪರ್ಕದಲ್ಲಿ ತತ್ಸಮಾನ. ಸಂವಹನ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಅಥವಾ ಜೆಸಿಒ ಶ್ರೇಣಿಯಲ್ಲಿನ ಎಲೆಕ್ಟ್ರಿಕಲ್ ಶಿಸ್ತು ಅಥವಾ 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ನಂತರದ ಅರ್ಹತೆ ವೃತ್ತಿಪರ ಅನುಭವವನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.

 ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌( Bharath Electronics Limited)ನ ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ನವೆಂಬರ್ 1, 2021 ರೊಳಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗೆ ಇರಬೇಕು. ಪ. ಜಾ/ ಪ.ಪಂ, ಓಬಿಸಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ. ನೇಮಕಾತಿ ಅಧಿಸೂಚನೆ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

Job Vacancy: ಎಚ್‌ಪಿಸಿಎಲ್‌ನಲ್ಲಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್( Bharath Electronics Limited) ನೇಮಕಾತಿಯ ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 1,20,000/-ರೂಗಳ ವರೆಗೆ ವೇತನ ಸಿಗಲಿದೆ. 

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್( Bharath Electronics Limited) ನೇಮಕಾತಿಯ ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಲಿಖಿತ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://www.bel-india.in/ ಗೆ ಭೇಟಿ ನೀಡಿ, ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 11 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಆಫ್ ಲೈನ್ ಮೂಲಕವೂ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಸೀನಿಯರ್ ಡೈರೆಕ್ಟರ್ ಜನರಲ್ ಮ್ಯಾನೇಜರ್ (HR), ನಾವಲ್ ಸಿಸ್ಟಮ್ಸ್ ಎಸ್ ಬಿಯು (Naval Systems SBU), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Electronics Ltd), ಜಾಲ ಹಳ್ಳಿ ಪೋಸ್ಟ್ ( Jalahalli post) ಬೆಂಗಳೂರು- 560 013 - ಈ ವಿಳಾಸಕ್ಕೆ ಅರ್ಜಿ ಕಳುಹಿಸಬಹುದು.

Jobs in Konkan Railway: ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟಂಟ್‌ ಹುದ್ದೆಗಳಿಗೆ ವಾಕ್ ಇನ್ ಇಂಟರ್‌ವ್ಯೂ
 

PREV
Read more Articles on
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್