BEL Recruitment 2022: ಬೆಂಗಳೂರಿನ BELನಲ್ಲಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

By Suvarna News  |  First Published Dec 24, 2021, 5:47 PM IST
  • ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ BEL ಅರ್ಜಿ ಆಹ್ವಾನ
  • ಖಾಲಿ ಇರುವ 10 ಪ್ರಾಜೆಕ್ಟ್ ಎಂಜಿನಿಯರ್-1 ಹುದ್ದೆಗಳಿಗೆ ನೇಮಕಾತಿ
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನ ಜನವರಿ 6 , 2022

ಬೆಂಗಳೂರು(ಡಿ.24): ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಇಎಲ್‌ನ ಬೆಂಗಳೂರು ಘಟಕದ ನೇಮಕಾತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ.  ಕಾಂಟ್ರ್ಯಾಕ್ಟ್ ಆಧಾರದ ಮೇಲೆ 10  ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 6 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ: ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಬಿ.ಇ/ಬಿ.ಟೆಕ್/ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 1,2021ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Tap to resize

Latest Videos

undefined

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಪ್ರಾಜೆಕ್ಟ್ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು  ಮೊದಲು ಅರ್ಹತೆಗೆ ಅನುಗುಣವಾಗಿ ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 40,000/- ರಿಂದ 55,000/-ರೂಗಳ ವರೆಗೆ ವೇತನ ಇರಲಿದೆ.

Bank of India Recruitment 2022: ವಿಶೇಷ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬ್ಯಾಂಕ್​ ಆಫ್​

ಅರ್ಜಿ ಶುಲ್ಕ ವಿವರ: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿಯನ್ನು ನೀಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ ಇಂತಿದೆ: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 6 ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ಈ ವಿಳಾಸಕ್ಕೆ ಕಳುಹಿಸಿ ಕೊಡಿ. 
Sr. Dy. General Manager (HR)
Naval Systems SBU
Bharat Electronics Limited
Jalahalli Post
Bangalore - 560013, Karnataka.
ಅಧಿಸೂಚನೆಯನ್ನು ಓದಲು ಈ ಲಿಂಕ್  ಕ್ಲಿಕ್ ಮಾಡಿ : 

Upcoming Government Exams 2022: ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ 2022ರ

ಹೈದ್ರಾಬಾದ್ ಬಿಇಎಲ್‌ನಲ್ಲಿ 84 ಹುದ್ದೆಗಳಿಗೆ ನೇಮಕಾತಿ: ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಇಎಲ್‌ನ ಹೈದರಾಬಾದ್ ಘಟಕದ ನೇಮಕಾತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ.  ಕಾಂಟ್ರ್ಯಾಕ್ಟ್ ಆಧಾರದ ಮೇಲೆ 84 ಟ್ರೈನಿ ಇಂಜಿನಿಯರ್-I ಮತ್ತು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಮೂಲಕ ಅರ್ಜಿ ಸಲ್ಲಿಸಬಹುದು. ಬಿಇಎಲ್ ನೇಮಕಾತಿ ನೋಟಿಫಿಕೇಷನ್ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

click me!