ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಖಾಲಿ ಇರುವ ವಿವಿಧ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾರ್ಚ್ 23ರೊಳಗೆ ಅರ್ಜಿ ಸಲ್ಲಿಸಬಹುದು.
ಬೆಂಗಳೂರು(ಮಾ.2): ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL) ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ ಒಟ್ಟು 23 ವಿವಿಧ ಎಂಜಿನಿಯರ್ ( engineer) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾರ್ಚ್ 23 ರೊಳಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.
ಒಟ್ಟು 23 ಹುದ್ದೆಗಳ ಮಾಹಿತಿ:
ಹಿರಿಯ ಸಹಾಯಕ ಇಂಜಿನಿಯರ್ (Senior Assistant Engineer) : 8 ಹುದ್ದೆಗಳು
ಯೋಜನಾ ಇಂಜಿನಿಯರ್ ( ಎಲೆಕ್ಟ್ರಾನಿಕ್ಸ್ ) : 10 ಹುದ್ದೆಗಳು
ಯೋಜನಾ (Project)ಇಂಜಿನಿಯರ್( ಮೆಕ್ಯಾನಿಕಲ್) : 05 ಹುದ್ದೆಗಳು
undefined
ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗನುಸಾರವಾಗಿ ವಿದ್ಯಾರ್ಹತೆ ಮಾಡಿರಬೇಕು.
ಪ್ರೊಜೆಕ್ಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು BE/B.Tech/ME/M.Tech ಜೊತೆಗೆ 15 ವರ್ಷಗಳ ಅನುಭವ ಇರಬೇಕು.
ಹಿರಿಯ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು BE/B.Tech/ME/M.Tech ಜೊತೆಗೆ 2 ವರ್ಷಗಳ ಅನುಭವ ಇರಬೇಕು.
DRDO RECRUITMENT 2022: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾರ್ಚ್ 14 ಕೊನೆ ದಿನ
ಆಯ್ಕೆ ಪ್ರಕ್ರಿಯೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವಯೋಮಿತಿ ನೀಡಲಾಗಿದೆ.
ಹಿರಿಯ ಸಹಾಯಕ ಇಂಜಿನಿಯರ್ ಹುದ್ದೆಗೆ ಗರಿಷ್ಠ - 50 ವರ್ಷ
ಪ್ರೊಜೆಕ್ಟ್ ಇಂಜಿನಿಯರ್ ಹುದ್ದೆಗೆ ಗರಿಷ್ಠ - 32 ವರ್ಷ
BMTC Recruitment 2022: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಂಟಿಸಿ
DRDO ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾರ್ಚ್ 14 ಕೊನೆ ದಿನ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation - DRDO) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಗ್ಯಾಸ್ ಟಬ್ರೈನ್ ರಿಸರ್ಚ್ ಎಸ್ಟಾಬ್ಲಿಶ್‌ಮೆಂಟ್ (GTRE) ನಲ್ಲಿ ಖಾಲಿ ಇರುವ 150 ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://www.drdo.gov.in/ಗೆ ಭೇಟಿ ನೀಡಬಹುದು.
ಒಟ್ಟು 150 ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ : 75
ಡಿಪ್ಲೊಮ ಅಪ್ರೆಂಟಿಸ್ ಟ್ರೈನಿ : 20
ಐಟಿಐ ಅಪ್ರೆಂಟಿಸ್ ಟ್ರೈನಿ : 25
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ( ಜೆನೆರಲ್ ಸ್ಟ್ರೀಮ್ ): 30
ಶೈಕ್ಷಣಿಕ ವಿದ್ಯಾರ್ಹತೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೊಮ, ಬಿಇ, ಐಟಿಐ ಪಾಸಾಗಿರಬೇಕು.