BDL Recruitment 2022: ಮ್ಯಾನೇಜರ್ ಹುದ್ದೆಗೆ ನೇಮಕಾತಿ

By Suvarna NewsFirst Published Apr 1, 2022, 1:11 PM IST
Highlights

ಭಾರತ್ ಡೈನಾಮಿಕ್ಸ್ ಲಿಮಿಟೆಡ್  ಖಾಲಿ ಇರುವ  2 ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 25  ಮೊದಲು ಆಫ್‌ಲೈನ್‌ನ  ಮೂಲಕ ಅರ್ಜಿ ಸಲ್ಲಿಸಬಹುದು. 

ಬೆಂಗಳೂರು(ಎ.1): ಭಾರತ್ ಡೈನಾಮಿಕ್ಸ್ ಲಿಮಿಟೆಡ್ (Bharat Dynamics Limited -BDL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.   ಒಟ್ಟು 2 ಮ್ಯಾನೇಜರ್ (Manager) ಹುದ್ದೆಗಳು ಖಾಲಿ ಇದ್ದು,  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 25  ಮೊದಲು ಆಫ್‌ಲೈನ್‌ನ  ಮೂಲಕ ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಡೈನಾಮಿಕ್ಸ್ ಲಿಮಿಟೆಡ್  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್  ಮತ್ತು ಕಮ್ಯುನಿಕೇಷನ್ಸ್,  ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್, ಪ್ರೊಡಕ್ಷನ್‌ನಲ್ಲಿ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು. 

ಕೆಲಸದ ಅನುಭವ: ಭಾರತ್ ಡೈನಾಮಿಕ್ಸ್ ಲಿಮಿಟೆಡ್  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಂಬಂಧಿಸಿದ ವಿಭಾಗದಲ್ಲಿ 3 ವರ್ಷಗಳವರೆಗಿನ ಅನುಭವ ಹೊಂದಿರಬೇಕು. 

Prasar Bharati Recruitment 2022: ಆಲ್‌ ಇಂಡಿಯಾ ರೇಡಿಯೋ ಹುದ್ದೆಗಳಿಗೆ ನೇಮಕಾತಿ

ವಯೋಮಿತಿ: ಭಾರತ್ ಡೈನಾಮಿಕ್ಸ್ ಲಿಮಿಟೆಡ್  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ಆಗಿದೆ. ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. 

ಆಯ್ಕೆ ಪ್ರಕ್ರಿಯೆ: ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ ವಿವರ: ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ₹60000 ರಿಂದ ₹180000 ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ ಕೊಡಬೇಕು.
ಭಾರತೀಯ ನೇವಲ್ ಪ್ಲೇಸ್‌ಮೆಂಟ್ ಏಜೆನ್ಸಿ
6 ನೇ ಮಹಡಿ, ಚಾಣಕ್ಯ ಭವನ
ಚಾಣಕ್ಯಪುರಿ, ನವದೆಹಲಿ - 110021 

KRIDL Recruitment 2022: ವಿವಿಧ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ 

ಕುದುರೆಮುಖ ಕಬ್ಬಿಣ ಕಾರ್ಖಾನೆಯಲ್ಲಿ ಎಂಜಿನಿಯರ್ ಪದವೀಧರರ ನೇಮಕಾತಿ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (Kudremukh Iron Ore Company Limited -KIOCL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ಸಿವಿಲ್ ಎಂಜಿನಿಯರ್, ಮೆಕ್ಯಾನಿಕಲ್ ಎಂಜಿನಿಯರ್ ಸೇರಿ ಒಟ್ಟು 9 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 11 ಮತ್ತು 12ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ https://kioclltd.in/ ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 9 ಹುದ್ದೆಗಳ ಮಾಹಿತಿ ಇಂತಿದೆ:
ಮೆಕ್ಯಾನಿಕಲ್ ಇಂಜಿನಿಯರ್: 4 ಹುದ್ದೆಗಳು
ಎಲೆಕ್ಟ್ರಿಕಲ್ ಇಂಜಿನಿಯರ್ : 2 ಹುದ್ದೆಗಳು
ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರ್ : 1 ಹುದ್ದೆ
ಸಹಾಯಕ ಸಿವಿಲ್ ಇಂಜಿನಿಯರ್ : 2 ಹುದ್ದೆಗಳು

ಸಂದರ್ಶನ ನಡೆಯುವ ಸ್ಥಳ: ಎಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರ್  ಹುದ್ದೆಗೆ ಎಪ್ರಿಲ್ 11 ರಂದು ಸಂದರ್ಶನ ನಡೆಯಲಿದ್ದು, ಮಿಕ್ಕ ಹುದ್ದೆಗೆ ಎಪ್ರಿಲ್ 12 ರಂದು ನಡೆಯಲಿದೆ.
KIOCL Limited, 2nd Block, Koramangala, Bengaluru – 560034, Karnataka

click me!