ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಎಂಜಿನಿಯರ್‌ ಹುದ್ದೆಗೆ ನೇಮಕಾತಿ, ಇಲ್ಲಿದೆ ಸಂಪೂರ್ಣ ವಿವರ

By Suvarna News  |  First Published Oct 12, 2023, 2:44 PM IST

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ಗ್ರಾಜುಯೇಟ್ ಅಪ್ರೆಂಟಿಸ್ ವಿಭಾಗದಲ್ಲಿ ಖಾಲಿ ಇರುವ ಎಂಜಿನಿಯರ್‌ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. 


ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ಗ್ರಾಜುಯೇಟ್ ಅಪ್ರೆಂಟಿಸ್ ವಿಭಾಗದಲ್ಲಿ ಖಾಲಿ ಇರುವ ಎಂಜಿನಿಯರ್‌ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎನ್‌ ಎ ಟಿ ಎಸ್‌ ಪೋರ್ಟಲ್‌ನ ಮೂಲಕ ಅಕ್ಟೋಬರ್‌ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನ ಗ್ರಾಜುಯೇಟ್ ಅಪ್ರೆಂಟಿಸ್ ವಿಭಾಗದಲ್ಲಿ ಮೆಕ್ಯಾನಿಕಲ್ ಇಂಜಿನಿಯರ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ ಲೈನ್‌ ನಲ್ಲಿ ಎನ್‌ ಎ ಟಿ ಎಸ್‌ ಪೋರ್ಟಲ್‌ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Tap to resize

Latest Videos

undefined

ಭಾರತ್ ಅರ್ಥ್ ಮೂವರ್ಸ್ ನರ್ಸ್, ಡಿಫೆನ್ಸ್, ಏರೋಸ್ಪೇಸ್, ಇಂಜಿನಿಯರಿಂಗ್ ವಿಭಾಗದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ವಿವರ: ಪದವೀಧರ 120 ಅಪ್ರೆಂಟಿಸ್ ಹುದ್ದೆ

ಮೆಕ್ಯಾನಿಕಲ್ ಇಂಜಿನಿಯರ್ - 40 ಹುದ್ದೆ
ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ -10 ಹುದ್ದೆ
ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ - 40 ಹುದ್ದೆ
ಸಿವಿಲ್ ಇಂಜಿನಿಯರ್- 30 ಹುದ್ದೆ

ಅಧಿಕೃತ https://www.apprenticeshipindia.gov.in/ ಪೋರ್ಟಲ್‌ನಲ್ಲಿ   ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15-10-2023\

ಸಂದರ್ಶನದ ದಿನಾಂಕ
18-10-2023 ರಿಂದ 20-10-2023

ವಯಸ್ಸಿನ ಮಿತಿ (31-10-2023 ರಂತೆ)
ಗರಿಷ್ಠ ವಯಸ್ಸು: 25 ವರ್ಷಕ್ಕಿಂತ ಹೆಚ್ಚಿರಬಾರದು.

ಶೈಕ್ಷಣಿಕ ವಿದ್ಯಾರ್ಹತೆ
ಅಭ್ಯರ್ಥಿಯು ಮೇಲೆ ತಿಳಿಸಿದ ಇಂಜಿನಿಯರಿಂಗ್ ಶಾಖೆಗಳಲ್ಲಿ ತಮ್ಮ ಬಿಇ/ ಬಿಟೆಕ್‌ ಪದವಿಯನ್ನು ಪಡೆದಿರಬೇಕು.

ಆಯ್ಕೆಯ ವಿಧಾನ
ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಯು ಸಂದರ್ಶನದಲ್ಲಿ ಪಡೆದ ಶೇಕಡಾವಾರು ಅಂಕಗಳ ಅರ್ಹತೆಯ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ.

ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿ: ಒಂದು ವರ್ಷ
ಸ್ಟೈಪೆಂಡ್ ವಿವರ: ರೂ. 17500 (ತಿಂಗಳಿಗೆ)

ಸಂದರ್ಶನದ ದಿನಾಂಕ
18 ಅಕ್ಟೋಬರ್ 2023 ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ಶಾಖೆ

19 ಅಕ್ಟೋಬರ್ 2023 ರಂದು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಶಾಖೆ
20 ಅಕ್ಟೋಬರ್ 2023 ರಂದು ಕಂಪ್ಯೂಟರ್ ಸೈನ್ಸ್ ಮತ್ತು ಸಿವಿಲ್ ಇಂಜಿನಿಯರಿಂಗ್ ಶಾಖೆ

ಸಂದರ್ಶನದ ಸ್ಥಳ
ಎನ್‌ ಎ ಟಿ ಎಸ್‌ ಪೋರ್ಟಲ್‌ನಲ್ಲಿ ನೋಂದಾಯಿತ ಅರ್ಜಿದಾರರು ಈ ಕೆಳಗಿನ ವಿಳಾಸದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್
ಸೆಂಟ್ರಲ್ ರಿಸರ್ಚ್ ಲ್ಯಾಬೋರೇಟರಿ (ಸಿ ಆರ್ ಎಲ್)
ಪ್ರವೇಶ ದ್ವಾರ: ಇಂದ್ರಪ್ರಸ್ಥ ಇಂಜಿನಿಯರಿಂಗ್ ಕಾಲೇಜಿನ ಎದುರು
ಸೈಟ್ 4, ಸಾಹಿಬಾಬಾದ್ ಇಂಡಸ್ಟ್ರಿಯಲ್ ಏರಿಯಾ, ಭಾರತ್ ನಗರ ಪೋಸ್ಟ್, ಘಾಜಿಯಾಬಾದ್-201010

ಸೂಚನೆ: ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರಯಾಣ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ ವೀಕ್ಷಿಸಬಹುದು.

click me!