BEL Recruitment 2022: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಫೆ.4 ಕೊನೆಯ ದಿನ

By Suvarna News  |  First Published Feb 1, 2022, 6:43 PM IST

ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್  ಖಾಲಿ ಇರುವ  ವಿವಿಧ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಫೆಬ್ರವರಿ 4ರೊಳಗೆ ಅರ್ಜಿ ಸಲ್ಲಿಸಬಹುದು.


ಬೆಂಗಳೂರು(ಫೆ.1): ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL)  ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ  247 ವಿವಿಧ ಎಂಜಿನಿಯರ್ ( engineer) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಫೆಬ್ರವರಿ 4ರೊಳಗೆ ಅರ್ಜಿ ಸಲ್ಲಿಸಬಹುದು.  ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಒಟ್ಟು 247 ಹುದ್ದೆಗಳ ಮಾಹಿತಿ ಇಂತಿದೆ:
ಪ್ರಾಜೆಕ್ಟ್ ಇಂಜಿನಿಯರ್ - 67 ಹುದ್ದೆಗಳು
ಟ್ರೈನಿ ಇಂಜಿನಿಯರ್ - 169 ಹುದ್ದೆಗಳು
ಟ್ರೈನಿ  ಆಫೀಸರ್ (ಹಣಕಾಸು) - 11 ಹುದ್ದೆಗಳು

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಬಿಇಎಲ್ (BEL) ನಲ್ಲಿ ಖಾಲಿ ಇರುವ  ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ   ಬಿ.ಇ/ಬಿ.ಟೆಕ್ ,ಎಂಇ, ಎಂಟೆಕ್ ವಿದ್ಯಾರ್ಹತೆ ಮತ್ತು ಟ್ರೈನಿ ಆಫೀಸರ್- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು MBA ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​  ನೇಮಕಾತಿಯ ವಿವಿಧ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1, 2022 ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು  PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಬಿಇಎಲ್ ನಲ್ಲಿ ಖಾಲಿ ಇರುವ ವಿವಿಧ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂಗಳ ವರೆಗೆ ವೇತನ ಸಿಗಲಿದೆ. ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ಅರ್ಜಿ ಶುಲ್ಕ:  ಬಿಇಎಲ್ ನಲ್ಲಿ ಖಾಲಿ ಇರುವ  ಎಂಜಿನಿಯರ್ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕ ಮತ್ತು ಇತರೆ ಹುದ್ದೆಗೆ 200 ರೂ ಅರ್ಜಿ ಶುಲ್ಕ ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ವೇತನ ವಿವರ: ಪ್ರಾಜೆಕ್ಟ್ ಇಂಜಿನಿಯರ್ – ತಿಂಗಳಿಗೆ 40,000 ರೂ. ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ – ತಿಂಗಳಿಗೆ 30,000 ರೂ ವೇತನ ದೊರೆಯಲಿದೆ.

GUEST FACULTY PROVISIONAL SELECTION LIST 2022: ಅತಿಥಿ ಉಪನ್ಯಾಸಕರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 9 ಕೊನೆಯ ದಿನ : ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ  6 ಸೀನಿಯರ್ ಎಂಜಿನಿಯರ್ (senior engineer) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಫೆಬ್ರವರಿ 9ರೊಳಗೆ ಅರ್ಜಿ ಸಲ್ಲಿಸಬಹುದು.  ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಕೆ:  ಬಿಇಎಲ್ ನಲ್ಲಿ ಖಾಲಿ ಇರುವ ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಫೆಬ್ರವರಿ 9,2022ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಬೇಕು.

ಕಚೇರಿ ವಿಳಾಸ:
DGM (HR/MR,MS&ADSN)
Bharat Electronics Limited
Jalahalli Post, Bangalore-560013, Karnataka.

click me!