BHEL Recruitment 2022: ಬಿಎಚ್‌ಇಎಲ್‌ ನಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ

By Suvarna NewsFirst Published Mar 5, 2022, 9:58 PM IST
Highlights

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್  ಖಾಲಿ ಇರುವ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನಿಸಿದೆ. ಒಟ್ಟು 76 ಹುದ್ದೆಗಳಿಗೆ ಮಾರ್ಚ್  19 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. 

ಬೆಂಗಳೂರು(ಮಾ.5):  ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ (Bharat Heavy Electronics Limited - BHEL)​​  ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಗ್ರಾಜುಯೇಟ್ ಅಪ್ರೆಂಟಿಸ್, ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್​ ಅಪ್ರೆಂಟಿಸ್ ಸೇರಿ ಒಟ್ಟು 76 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ನಲ್ಲಿ ಮಾರ್ಚ್  19 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ​www.bhel.com ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 76 ಹುದ್ದೆಗಳ ಮಾಹಿತಿ ಇಂತಿದೆ
ಟ್ರೇಡ್ ಅಪ್ರೆಂಟಿಸ್- 61 ಹುದ್ದೆಗಳು
ಗ್ರಾಜುಯೇಟ್/ ಟೆಕ್ನಿಷಿಯನ್ ಅಪ್ರೆಂಟಿಸ್- 15 ಹುದ್ದೆಗಳು 

ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಡಿಪ್ಲೋಮಾ/ ಐಟಿಐ/ ಎಂಜಿನಿಯರಿಂಗ್ ಪಾಸಾಗಿರಬೇಕು. ಮತ್ತು 60% ರಷ್ಟು ಅಂಕಗಳನ್ನು ಪಡೆದಿರಬೇಕು.

SIDBI Recruitment 2022 : ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗ ನೇಮಕಾತಿ

ವಯೋಮಿತಿ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 27 ವರ್ಷದೊಳೆದಿರಬೇಕು. SC/ST/PwBD/OBC/PH ಅಭ್ಯರ್ಥಿಗಳಿಗೆ ಸರಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡಿ ಬಳಿಕ ದಾಖಲಾತಿ ಪರಿಶೀಲನೆ ಮತ್ತು  ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ  ನಿಯಮಾನುಸಾರ ವೇತನ ದೊರೆಯಲಿದೆ.

ಉದ್ಯೋಗದ ಸ್ಥಳ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ  ಉತ್ತರ ಪ್ರದೇಶದ ಝಾನ್ಸಿಯಲ್ಲಿ ಪೋಸ್ಟಿಂಗ್ ಮಾಡಲಾಗುತ್ತದೆ.

Bank of Baroda Recruitment 2022: ತಜ್ಞ ಅಧಿಕಾರಿ ಹುದ್ದೆಗೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ 

DRDO ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾರ್ಚ್ 14 ಕೊನೆ ದಿನ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation - DRDO)  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಗ್ಯಾಸ್ ಟಬ್ರೈನ್ ರಿಸರ್ಚ್‌ ಎಸ್ಟಾಬ್ಲಿಶ್‌ಮೆಂಟ್ (GTRE) ನಲ್ಲಿ ಖಾಲಿ ಇರುವ 150 ಅಪ್ರೆಂಟಿಸ್  ಟ್ರೈನಿಂಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು,  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 14  ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://www.drdo.gov.in/ಗೆ ಭೇಟಿ ನೀಡಬಹುದು.

ಒಟ್ಟು 150 ಹುದ್ದೆಗಳ ವಿವರ 
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ : 75
ಡಿಪ್ಲೊಮ ಅಪ್ರೆಂಟಿಸ್ ಟ್ರೈನಿ : 20
ಐಟಿಐ ಅಪ್ರೆಂಟಿಸ್ ಟ್ರೈನಿ : 25
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ( ಜೆನೆರಲ್ ಸ್ಟ್ರೀಮ್ ): 30

ಶೈಕ್ಷಣಿಕ ವಿದ್ಯಾರ್ಹತೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ  ಹುದ್ದೆಗಳ ಭರ್ತಿಗೆ  ಅರ್ಜಿ  ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೊಮ, ಬಿಇ, ಐಟಿಐ ಪಾಸಾಗಿರಬೇಕು.

click me!