BSF Recruitment 2022: ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

Published : Jan 15, 2022, 11:10 PM IST
BSF Recruitment 2022: ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

ಸಾರಾಂಶ

ಗಡಿ ಭದ್ರತಾ ಪಡೆ  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. 788 ಕಾನ್ಸ್​ಟೇಬಲ್ ಹುದ್ದೆಗಳು ಖಾಲಿ ಇದ್ದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 28  ಕೊನೆಯ ದಿನಾಂಕವಾಗಿದೆ. 

ಬೆಂಗಳೂರು(ಜ.15): ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆ (Border Security Force-BSF) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಬಿಎಸ್‌ಎಫ್ 2788 ಕಾನ್ಸ್​ಟೇಬಲ್ (Constable) ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಿದೆ.  ಅಧಿಸೂಚನೆ ಪ್ರಕಟವಾದ 45 ದಿನಗಳೊಳಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿದ್ದು, ಈ ಪ್ರಕಾರ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 28  ಕೊನೆಯ ದಿನಾಂಕವಾಗಿದೆ.  ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://bsf.gov.in/Home ಗೆ ಭೇಟಿ ನೀಡಿ.

ಒಟ್ಟು 2788 ಹುದ್ದೆಯ ವಿವರ: 
ಪುರುಷ ಅಭ್ಯರ್ಥಿಗಳಿಗೆ 2651 ಹುದ್ದೆಗಳು ಮೀಸಲಾಗಿದೆ
ಮಹಿಳಾ ಅಭ್ಯರ್ಥಿಗಳಿಗೆ 137 ಹುದ್ದೆಗಳು ಮೀಸಲಾಗಿದೆ

ಶೈಕ್ಷಣಿಕ ವಿದ್ಯಾರ್ಹತೆ: ಗಡಿ ಭದ್ರತಾ ಪಡೆಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ, ITI, ಡಿಪ್ಲೋಮಾ ಪಾಸಾಗಿರಬೇಕು.

NVS Recruitment 2022: ಬರೋಬ್ಬರಿ 1925 ಹುದ್ದೆಗಳ ಭರ್ತಿಗೆ ಮುಂದಾದ ನವೋದಯ ವಿದ್ಯಾಲಯ ಸಮಿತಿ

ಅನುಭವ: ಗಡಿ ಭದ್ರತಾ ಪಡೆಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಆಯಾ ಟ್ರೇಡ್‌ಗಳಲ್ಲಿ ಎರಡು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ಅಭ್ಯರ್ಥಿಗಳು ವೃತ್ತಿ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಒಂದು ವರ್ಷದ ಸರ್ಟಿಫಿಕೇಟ್ ಕೋರ್ಸ್ ಹೊಂದಿರಬೇಕು. ಜೊತೆಗೆ ಟ್ರೇಡ್​​ನಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

ವಯೋಮಿತಿ: ಗಡಿ ಭದ್ರತಾ ಪಡೆಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಆಗಸ್ಟ್​ 1, 2021ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು. ಆಯಾಯ ವರ್ಗಕ್ಕೆ ಅನುಸಾರವಾಗಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಗಡಿ ಭದ್ರತಾ ಪಡೆಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ದೈಹಿಕ ಗುಣಮಟ್ಟ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ಗಡಿ ಭದ್ರತಾ ಪಡೆಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ  21,700 ರೂ ನಿಂದ 69,100 ರೂ ವೇತನ ನೀಡಲಾಗುತ್ತದೆ. ಆಯ್ಕೆಯಾದವರು ಭಾರತದೆಲ್ಲೆಡೆ ಕೆಲಸ ಮಾಡಬೇಕಾಗುತ್ತದೆ. 

ಅರ್ಜಿ ಶುಲ್ಕ: ಗಡಿ ಭದ್ರತಾ ಪಡೆಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC/ST/ESM/ಮಹಿಳಾ ಅಭ್ಯರ್ಥಿಗಳಿಗೆ  ಯಾವುದೇ ಅರ್ಜಿ ಶುಲ್ಕವಿಲ್ಲ.

TISS FACULTY RECRUITMENT 2022: ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

10, 12 ನೇ ತರಗತಿ ಉತ್ತೀರ್ಣರಾದವರಿಗೆ ಭಾರತೀಯ ಫಿರಂಗಿದಳದಲ್ಲಿ ಉದ್ಯೋಗ: ಭಾರತೀಯ ಸೇನೆಯು (Indian Army) ನಾಸಿಕ್‌ ನಲ್ಲಿನ ಇಂಡಿಯನ್‌ ಆರ್ಮಿ ಫಿರಂಗಿದಳದಲ್ಲಿ (Indian Army Artillery ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಎಲ್ ಡಿಸಿ, ಕುಕ್, ಫೈರ್ ಮ್ಯಾನ್ ಸೇರಿದಂತೆ ಒಟ್ಟು 107 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳು  ಜನವರಿ 22, 2022ರ ಮೊದಲು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಅವರು ಅರ್ಜಿ ಸಲ್ಲಿಸುತ್ತಿರುವ ಹುದ್ದೆಗಳಿಗೆ ಅನುಗುಣವಾಗಿ 10 ಮತ್ತು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಿವಿಧ ಹುದ್ದೆಗಳಿಗೆ ವಿವಿಧ ವಿದ್ಯಾರ್ಹತೆಗಳನ್ನು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ indianarmy.nic.in. ಗೆ ಭೇಟಿ ನೀಡಿ.

ವಿದ್ಯಾರ್ಹತೆ ಮತ್ತು ವಯೋಮಿತಿ: ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು. ಖಾಲಿ ಇರುವ ಹುದ್ದೆಗಳಲ್ಲಿ ಯಾವುದೇ ವಿಭಾಗಕ್ಕೆ ಅರ್ಜಿ ಸಲ್ಲಿವವರಿಗೆ ಕನಿಷ್ಠ 18 ವರ್ಷ ಆಗಿರಬೇಕು.   ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 30 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 28 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು indianarmy.nic.in.ಗೆ ಭೇಟಿ ನೀಡಿ ನೋಟಿಫಿಕೇಶನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯನ್ನು ಪ್ರಿಂಟ್‌ ತೆಗೆದುಕೊಂಡು, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಅರ್ಜಿ ಯಾವ ಹುದ್ದೆಗೆ ಎಂದು ಇಂಗ್ಲಿಷ್‌ನಲ್ಲಿ ಲಕೋಟೆ ಮೇಲೆ ಬರೆದಿರಬೇಕು.
'The Commandant,
Headquarters
Artillery Centre
Nasik Road Camp PIN-422102

PREV
Read more Articles on
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್