BSNL Recruitment 2022: ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಜ.20 ಅರ್ಜಿ ಸಲ್ಲಿಸಲು ಕೊನೆಯ ದಿನ

By Suvarna NewsFirst Published Jan 16, 2022, 6:35 PM IST
Highlights

BSNL ಒಟ್ಟು 10 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಶುರು ಮಾಡಿದೆ. ಜನವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಬೆಂಗಳೂರು(ಜ.1): ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತೀಯ ಸಂಚಾರ ನಿಗಮ ಲಿಮಿಟೆಡ್ (Bharath Sanchar Nigam Limited-BSNL), ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಶುರು ಮಾಡಿದೆ. ಒಟ್ಟು 10 ಗ್ರಾಜುಯೇಟ್​ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ (Diploma Apprentice) ಹುದ್ದೆಗಳು ಖಾಲಿ ಇದ್ದು, ಈ ಅಪ್ರೆಂಟಿಸ್ ಹುದ್ದೆಗಳಿಗೆ  ಅರ್ಹರು ಹಾಗೂ ಸೂಕ್ತ ಅಭ್ಯರ್ಥಿಗಳು ಜನವರಿ 20, 2022ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ mhrdnats.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಅಧಿಕೃತ ಪೋರ್ಟಲ್ https://bsnl.co.in/ ಗೆ ಭೇಟಿ ನೀಡಿ. 

 ಭಾರತೀಯ ಸಂಚಾರ ನಿಗಮ  ಈ ಬಾರಿ  ಡೆಹ್ರಾಡೂನ್, ಹರಿದ್ವಾರ, ನೈನಿತಾಲ್​​ ನಲ್ಲಿ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.  ಡೆಹ್ರಾಡೂನ್ ನಲ್ಲಿ 4 ಹುದ್ದೆಗಳು, ಹರಿದ್ವಾರದಲ್ಲಿ 3 ಹುದ್ದೆಗಳು ಮತ್ತು ನೈನಿತಾಲ್ ನಲ್ಲಿ 3 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 

ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು AICTE ಅಥವಾ GOI ನಿಂದ ಗುರುತಿಸಲ್ಪಟ್ಟ ಇಂಜಿನಿಯರಿಂಗ್/ತಂತ್ರಜ್ಞಾನ ಕ್ಷೇತ್ರದಲ್ಲಿ (ದೂರಸಂಪರ್ಕ/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ರೇಡಿಯೋ/ಕಂಪ್ಯೂಟರ್/ಇನ್‌ಸ್ಟ್ರುಮೆಂಟೇಶನ್/ಮಾಹಿತಿ ತಂತ್ರಜ್ಞಾನ) ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.  ಟೆಲಿಕಾಂ ಸರ್ಕಲ್, ಇಂಜಿನಿಯರಿಂಗ್/ ಟೆಕ್ನಾಲಜಿ ಕ್ಷೇತ್ರದಲ್ಲಿ (ಎಲೆಕ್ಟ್ರಾನಿಕ್ಸ್/ ಇ & ಟಿಸಿ/ ಕಂಪ್ಯೂಟರ್/ ಐಟಿ)  ಡಿಪ್ಲೋಮಾವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಹೊಂದಿರುವವರನ್ನು ಒಂದು ವರ್ಷದ ಅವಧಿಗೆ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ನೇಮಕ ಮಾಡಿಕೊಳ್ಳಲಿದೆ. ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷವಿರುತ್ತದೆ. 

ವಯೋಮಿತಿ: ಗ್ರಾಜುಯೇಟ್​ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 31/ 01/ 2022 ತಕ್ಕಂತೆ  25 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಗ್ರಾಜುಯೇಟ್​ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಶಾರ್ಟ್​​ಲಿಸ್ಟಿಂಗ್​, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.  8,000 ರೂ. ಸ್ಟಿಪೆಂಡ್​ ನೀಡಲಾಗುತ್ತದೆ. 

DHFWS CHIKKABALLAPUR RECRUITMENT 2022: ಮೆಡಿಕಲ್ ಆಫೀಸರ್ ಸೇರಿ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಜಮ್ಮು, ಶ್ರೀನಗರದಲ್ಲಿ ಒಟ್ಟು 12 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಮುಂದಾದ ಬಿಎಸ್‌ಎನ್‌ಎಲ್‌: ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (Bharath Sanchar Nigam Limited-BSNL), ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಶುರು ಮಾಡಿದೆ. ಒಟ್ಟು 12 ಗ್ರಾಜುಯೇಟ್​ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ (Diploma Apprentice) ಹುದ್ದೆಗಳು ಖಾಲಿ ಇದ್ದು, ಈ ಅಪ್ರೆಂಟಿಸ್ ಹುದ್ದೆಗಳಿಗೆ ಡಿಸೆಂಬರ್ 29ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಹರು ಹಾಗೂ ಸೂಕ್ತ ಅಭ್ಯರ್ಥಿಗಳು ಜನವರಿ 20, 2022ರಂದು ಅರ್ಜಿ ಸಲ್ಲಿಸಬಹುದಾಗಿದೆ. ಬಿಎಸ್‌ಎನ್‌ಎಲ್,  ಜಮ್ಮು, ಶ್ರೀನಗರದಲ್ಲಿ ನೇಮಕಾತಿಗೆ ಈ ಬಾರಿ ಅರ್ಜಿಗಳನ್ನು ಆಹ್ವಾನಿಸಿದೆ.  ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅಧಿಕೃತ ಪೋರ್ಟಲ್ www.mhrdnats.gov.in ಅಥವಾ https://bsnl.co.in/ ಗೆ ಭೇಟಿ ನೀಡಿ. 

BSF Recruitment 2022: ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ತಮ್ಮನ್ನು ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯ (Ministry of Human Resource Development) ಪೋರ್ಟಲ್ mhrdnats.gov.in ನಲ್ಲಿ ನೋಂದಾಯಿಸಿಕೊಳ್ಳಬೇಕು.   ಜಮ್ಮು, ಶ್ರೀನಗರ ಟೆಲಿಕಾಂ ಸರ್ಕಲ್, ಇಂಜಿನಿಯರಿಂಗ್/ ಟೆಕ್ನಾಲಜಿ ಕ್ಷೇತ್ರದಲ್ಲಿ (ಎಲೆಕ್ಟ್ರಾನಿಕ್ಸ್/ ಇ& ಟಿಸಿ/ ಕಂಪ್ಯೂಟರ್/ ಐಟಿ)  ಡಿಪ್ಲೋಮಾ ವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಹೊಂದಿರುವವರನ್ನು ಒಂದು ವರ್ಷದ ಅವಧಿಗೆ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ನೇಮಕ ಮಾಡಿಕೊಳ್ಳಲಿದೆ. ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷವಿರುತ್ತದೆ. 

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಗ್ರಾಜುಯೇಟ್​ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಶಾರ್ಟ್​​ಲಿಸ್ಟಿಂಗ್​, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. ಮತ್ತು ಜಮ್ಮು ಕಾಶ್ಮೀರದ ಜಮ್ಮು ಮತ್ತು ಶ್ರೀನಗರದಲ್ಲಿ ಉದ್ಯೋಗ ನೀಡಲಾಗುತ್ತದೆ.

click me!