BSNL Recruitment 2022: ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಸ್‌ಎನ್‌ಎಲ್‌

By Suvarna News  |  First Published Feb 27, 2022, 9:20 PM IST

ಭಾರತೀಯ ಸಂಚಾರ ನಿಗಮ ಲಿಮಿಟೆಡ್ ಅಪ್ರೆಂಟಿಸ್  ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಶುರು ಮಾಡಿದೆ.  ಅರ್ಹರು ಹಾಗೂ ಸೂಕ್ತ ಅಭ್ಯರ್ಥಿಗಳು ಮಾರ್ಚ್ 20, 2022ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.


ಬೆಂಗಳೂರು(ಫೆ.27): ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತೀಯ ಸಂಚಾರ ನಿಗಮ ಲಿಮಿಟೆಡ್ (Bharath Sanchar Nigam Limited-BSNL), ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಶುರು ಮಾಡಿದೆ. ಒಟ್ಟು27  ಡಿಪ್ಲೋಮಾ ಅಪ್ರೆಂಟಿಸ್ (Diploma Apprentice) ಹುದ್ದೆಗಳು ಖಾಲಿ ಇದ್ದು, ಈ ಅಪ್ರೆಂಟಿಸ್ ಹುದ್ದೆಗಳಿಗೆ  ಅರ್ಹರು ಹಾಗೂ ಸೂಕ್ತ ಅಭ್ಯರ್ಥಿಗಳು ಮಾರ್ಚ್ 20, 2022ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ mhrdnats.gov.in ನಲ್ಲಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗೆ ಅಧಿಕೃತ ಪೋರ್ಟಲ್ https://bsnl.co.in/ ಗೆ ಭೇಟಿ ನೀಡಿ. 

 ಭಾರತೀಯ ಸಂಚಾರ ನಿಗಮ  ಈ ಬಾರಿ  ಅಂಬಾಲ-4 ,ಫರೀದಾಬಾದ್-3, ಗುರ್​ಗಾವ್​-3, ಹಿಸ್ಸಾರ್-4, ಕರ್ನಲ್-4, ರೇವಾರಿ-3, ರೊಹ್ಟಕ್-6 ಹುದ್ದೆ ಹೀಗೆ ಒಟ್ಟು 27 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

Tap to resize

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು AICTE ಅಥವಾ GOI ನಿಂದ ಗುರುತಿಸಲ್ಪಟ್ಟ ಇಂಜಿನಿಯರಿಂಗ್/ತಂತ್ರಜ್ಞಾನ ಕ್ಷೇತ್ರದಲ್ಲಿ (ದೂರಸಂಪರ್ಕ/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ರೇಡಿಯೋ/ಕಂಪ್ಯೂಟರ್/ಇನ್‌ಸ್ಟ್ರುಮೆಂಟೇಶನ್/ಮಾಹಿತಿ ತಂತ್ರಜ್ಞಾನ) ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.  ಟೆಲಿಕಾಂ ಸರ್ಕಲ್, ಇಂಜಿನಿಯರಿಂಗ್/ ಟೆಕ್ನಾಲಜಿ ಕ್ಷೇತ್ರದಲ್ಲಿ (ಎಲೆಕ್ಟ್ರಾನಿಕ್ಸ್/ ಇ & ಟಿಸಿ/ ಕಂಪ್ಯೂಟರ್/ ಐಟಿ)  ಡಿಪ್ಲೋಮಾವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಹೊಂದಿರುವವರನ್ನು ಒಂದು ವರ್ಷದ ಅವಧಿಗೆ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ನೇಮಕ ಮಾಡಿಕೊಳ್ಳಲಿದೆ. ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷವಿರುತ್ತದೆ. 

FSSAI RECRUITMENT 2022: ಆಹಾರ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಭಾರತೀಯ ಸಂಚಾರ ನಿಗಮ ಲಿಮಿಟೆಡ್ ನಲ್ಲಿನ ಖಾಲಿ ಇರುವ  ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು  25 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ: ಭಾರತೀಯ ಸಂಚಾರ ನಿಗಮ ಲಿಮಿಟೆಡ್ ನಲ್ಲಿನ ಖಾಲಿ ಇರುವ  ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ  ಸಲ್ಲಿಸಿದ ಅಭ್ಯರ್ಥಿಯನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

 ವೇತನ: ಭಾರತೀಯ ಸಂಚಾರ ನಿಗಮ ಲಿಮಿಟೆಡ್ ನಲ್ಲಿನ ಖಾಲಿ ಇರುವ ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ    ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.  8,000 ರೂ. ಸ್ಟಿಪೆಂಡ್​ ನೀಡಲಾಗುತ್ತದೆ. 

ಉದ್ಯೋಗದ ಸ್ಥಳ: ಭಾರತೀಯ ಸಂಚಾರ ನಿಗಮ ಲಿಮಿಟೆಡ್ ನಲ್ಲಿನ ಖಾಲಿ ಇರುವ ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ    ಆಯ್ಕೆಯಾಗುವ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ನಿರ್ವಹಿಸಲು ತಯಾರಿರಬೇಕಾಗುತ್ತದೆ.

SAI Recruitment 2022: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ, ಮಾಸಿಕ 1 ಲಕ್ಷದವರೆಗೆ ವೇತನ 

ಬೆಂಗಳೂರಿನ BELನಲ್ಲಿ 360 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited- BEL)  ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 360 ಹುದ್ದೆಗಳು ಖಾಲಿ ಇದ್ದು, ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್‌ ಮೂಲಕ ಮಾರ್ಚ್ 10 ರೊಳಗೆ ಅರ್ಜಿ ಸಲ್ಲಿಸಬಹುದು.  ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಒಟ್ಟು 360  ಹುದ್ದೆಗಳ ಮಾಹಿತಿ ಇಂತಿದೆ:
ಟೆಕ್ನಿಶಿಯನ್ ಅಪ್ರೆಂಟಿಸ್ (Technician Apprentice) - 100 ಹುದ್ದೆಗಳು
ಗ್ರಾಜುಯೇಟ್ ಅಪ್ರೆಂಟಿಸ್ (Graduate Apprentice) - 260 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ: ಬಿಇಎಲ್ (BEL) ನಲ್ಲಿ ಖಾಲಿ ಇರುವ  ಅಪ್ರೆಂಟಿಸ್  ಹುದ್ದೆಗಳಿಗೆ  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ  B.E,B.Tech ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಮಾಡಿರಬೇಕು.

click me!