ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ನವದೆಹಲಿ, (ಆ.19): ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಕಂಪ್ಯೂಟರ್ ಆಧಾರಿತ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ) ರಚಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.
ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ನೇಮಕಾತಿ ಸಂಸ್ಥೆ ರಚನೆಗೆ ಒಪ್ಪಿಗೆ ನೀಡಲಾಗಿದೆ.
undefined
ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹುದ್ದೆಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಂಪುಟ ಸಭೆಯ ನಿರ್ಧಾರಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಾವಡೇಕರ್ 'ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಕಂಪ್ಯೂಟರ್ ಆಧಾರಿತ ಸಾಮಾನ್ಯ ಅರ್ಹತಾ ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ) ರಚಿಸಲು ಅನುಮೋದನೆ ನೀಡಿದೆ' ಎಂದು ಸ್ಪಷ್ಟಪಡಿಸಿದರು.
ವಿವಿಧ ಸರ್ಕಾರಿ ಸಂಸ್ಥೆಗಳು, ನೇಮಕಾತಿ ಪ್ರಾಧಿಕಾರಗಳು ಪ್ರತ್ಯೇಕ ಪರೀಕ್ಷೆಗಳನ್ನು ನಡೆಸುವ ಬದಲು, ಒಂದೇ ಸಾಮಾನ್ಯ ಅರ್ಹತಾ ಅಥವಾ ಪ್ರವೇಶ ಪರೀಕ್ಷೆ ಇರಲಿದೆ. ಇದರ ಫಲಿತಾಂಶ ಮೂರು ವರ್ಷಗಳವರೆಗೆ ಮಾನ್ಯತಾ ಅವಧಿ ಹೊಂದಿರುತ್ತದೆ. ಎಷ್ಟು ಬಾರಿಯಾದರೂ ಈ ಪರೀಕ್ಷೆ ಎದುರಿಸಬಹುದು. ಜತೆಗೆ, ಎಲ್ಲ ಆಕಾಂಕ್ಷಿಗಳಿಗೆ ಒಂದೇ ನೋಂದಣಿ ಪೋರ್ಟಲ್ ಇರಲಿದೆ.
ರಾಷ್ಟ್ರೀಯ ನೇಮಕಾತಿ ಪ್ರಾಧಿಕಾರ ಸ್ವಾಯತ್ತ ಸಂಸ್ಥೆಯಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸುವುದು ಸೇರಿ ಉದ್ಯೋಗಾಕಾಂಕ್ಷಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮುಖ್ಯವಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ವಿಳಂಬ, ಅಕ್ರಮ ಹಾಗೂ ಮಹಿಳಾ ಆಕಾಂಕ್ಷಿಗಳ ಸಂಖ್ಯೆ ಕಡಿಮೆಯಾಗಿರುವುದು ಸೇರಿ ಹಲವು ಅಡಚಣೆಗಳಿಗೆ ಪರಿಹಾರ ಕಂಡುಕೊಳ್ಳಲಿದೆ.