ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ 5 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಮಾ.3): ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (Central Electronics Engineering Research Institute - CEERI) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ (Technical Assistant) ಹುದ್ದೆಗಳು ಸೇರಿ ಒಟ್ಟು 5 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://www.ceeri.res.in/recruitments/ ಗೆ ಭೇಟಿ ನೀಡಬಹುದು.
ಒಟ್ಟು 5 ಹುದ್ದೆಗಳ ಮಾಹಿತಿ:
ಜೂನಿಯರ್ ರಿಸರ್ಚ್ ಫೆಲೋ: 04
ಟೆಕ್ನಿಕಲ್ ಅಸಿಸ್ಟೆಂಟ್: 01
undefined
ಶೈಕ್ಷಣಿಕ ವಿದ್ಯಾರ್ಹತೆ: ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಎಂಎಸ್ಸಿ, ಬಿಎಸ್ಸಿ, ಡಿಪ್ಲೋಮಾ, ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
NTPC Recruitment 2022: ವೈದ್ಯಕೀಯ ಶಿಕ್ಷಣ ಪಡೆದವರಿಗೆ ಭರ್ಜರಿ ಅವಕಾಶ
ವಯೋಮಿತಿ: ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಯಸ್ಸು 35 ರಿಂದ 50 ವರ್ಷದೊಳಗಿರಬೇಕು.
ವೇತನ: ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ.
ಜೂನಿಯರ್ ರಿಸರ್ಚ್ ಫೆಲೋ-ಮಾಸಿಕ ₹ 31,000
ಟೆಕ್ನಿಕಲ್ ಅಸಿಸ್ಟೆಂಟ್-ಮಾಸಿಕ ₹ 20,000
BMTC Recruitment 2022: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಂಟಿಸಿ
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾರ್ಚ್ 14 ಕೊನೆ ದಿನ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation - DRDO) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಗ್ಯಾಸ್ ಟಬ್ರೈನ್ ರಿಸರ್ಚ್ ಎಸ್ಟಾಬ್ಲಿಶ್‌ಮೆಂಟ್ (GTRE) ನಲ್ಲಿ ಖಾಲಿ ಇರುವ 150 ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://www.drdo.gov.in/ಗೆ ಭೇಟಿ ನೀಡಬಹುದು.
ಒಟ್ಟು 150 ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ : 75
ಡಿಪ್ಲೊಮ ಅಪ್ರೆಂಟಿಸ್ ಟ್ರೈನಿ : 20
ಐಟಿಐ ಅಪ್ರೆಂಟಿಸ್ ಟ್ರೈನಿ : 25
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ( ಜೆನೆರಲ್ ಸ್ಟ್ರೀಮ್ ): 30
ಶೈಕ್ಷಣಿಕ ವಿದ್ಯಾರ್ಹತೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೊಮ, ಬಿಇ, ಐಟಿಐ ಪಾಸಾಗಿರಬೇಕು.
ಆಯ್ಕೆ ಪ್ರಕ್ರಿಯೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.