ಕರ್ನಾಟಕ ಕೇಂದ್ರೀಯ ಅಂತರ್ಜಲ ಮಂಡಳಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದೆ.
ಬೆಂಗಳೂರು(ಡಿ.31): ಕರ್ನಾಟಕ ಕೇಂದ್ರೀಯ ಅಂತರ್ಜಲ ಮಂಡಳಿ-ಬೆಂಗಳೂರು (Central Ground Water Board Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಸ್ಟಾಫ್ ಕಾರ್ ಡ್ರೈವರ್ (Staff Car Driver) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್ಎಸ್ಎಲ್ಸಿ (SSLC) ಪಾಸಾದ ಅಭ್ಯರ್ಥಿಗಳು ಈ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 1, 2022. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.cgwb.gov.in ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ/ಬೋರ್ಡ್ನಿಂದ 10ನೇ ತರಗತಿ/ಎಸ್ಎಸ್ಎಲ್ಸಿ ಪಾಸಾಗಿರಬೇಕು. ಕೇಂದ್ರ/ರಾಜ್ಯ ಸರ್ಕಾರ/ಸಾರ್ವಜನಿಕ ವಲಯದ ಉದ್ಯಮ/ಖಾಸಗಿ ವಲಯದ ಕಂಪನಿಯಿಂದ ಕಂಪನಿ ಕಾಯಿದೆಯಡಿ ನೋಂದಣಿಯಾಗಿರುವ ಹೆವಿ ವೆಹಿಕಲ್ ಡ್ರೈವಿಂಗ್ ಲೈಸೆನ್ಸ್ ಹೊಂದಿರುವ ಮೂರು ವರ್ಷಗಳ ಅನುಭವ ಇರಬೇಕು. ಮೋಟಾರು ವಾಹನ ಯಾಂತ್ರಿಕತೆಯ ಜ್ಞಾನ ಹೊಂದಿರಬೇಕು. ಹಿಂದಿ ಅಥವಾ ಇಂಗ್ಲಿಷ್ ಭಾಷೆ ಮತ್ತು ಸಂಖ್ಯೆಗಳನ್ನು ಓದಲು ಮತ್ತು ಬರೆಯಲು ಗೊತ್ತಿರಬೇಕು.
undefined
KSP Recruitment 2022: ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆ
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಎನ್ವಲಪ್ ಮೇಲೆ “APPLICATION FOR THE POST OF STAFF CAR DRIVER (ORDINARY GRADE)” ಎಂದು ಬರೆದು ಈ ಕೆಳಕಂಡ ವಿಳಾಸಕ್ಕೆ ಫೆಬ್ರವರಿ 1, 2022ರೊಳಗೆ ಕಳುಹಿಸಬೇಕು.
ಪ್ರಾದೇಶಿಕ ನಿರ್ದೇಶಕರು
ಕೇಂದ್ರೀಯ ಅಂತರ್ಜಲ ಮಂಡಳಿ (CGWB)
ಜಲ ಶಕ್ತಿ ಸಚಿವಾಲಯ
ಜಲಸಂಪನ್ಮೂಲ ಇಲಾಖೆ
ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ
ನೈಋತ್ಯ ಪ್ರದೇಶ, ಭುಜಲ್ ಭವನ
27ನೇ ಮೇನ್, 7ನೇ ಕ್ರಾಸ್, HSR ಲೇಔಟ್ ಸೆಕ್ಟರ್-1
ಬೆಂಗಳೂರು-560102
South Indian Bank Recruitment 2022: ಸ್ಪೆಷಲಿಸ್ಟ್ ಆಫೀಸರ್ ಸೇರಿ ಹಲವು ಹುದ್ದೆಗಳಿಗೆ ಅರ್ಜಿಆಹ್ವಾನ
ಬೆಂಗಳೂರಿನ BELನಲ್ಲಿ ಟ್ರೈನಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ 8 ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜನವರಿ 15,2022ರೊಳಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಕೆ: ಬಿಇಎಲ್ ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಜನವರಿ 15,2022ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಬೇಕು.
ಕಚೇರಿ ವಿಳಾಸ:
DGM (HR/MR,MS&ADSN)
Bharat Electronics Limited
Jalahalli Post, Bangalore-560013, Karnataka.
ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಸೂಚನೆ ಈ ಲಿಂಕ್ ಕ್ಲಿಕ್ ಮಾಡಿ ಓದಿ
SIMS Shivamogga Recruitment 2022: ವಿವಿಧ ಹುದ್ದೆಗಳ ಭರ್ತಿಗೆ ಕರೆ ನೀಡಿದ ವೈದ್ಯಕೀಯ ವಿಜ್ಞಾನ ಸಂಸ್ಥೆ