ಕೇಂದ್ರ ರೈಲ್ವೆಯು ಖಾಲಿ ಇರುವ 20 ಕಿರಿಯ ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 14 ಕೊನೆಯ ದಿನವಾಗಿದೆ.
ಬೆಂಗಳೂರು(ಮಾ.7): ಕೇಂದ್ರ ರೈಲ್ವೆಯು (Central Railways) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 20 ಕಿರಿಯ ತಾಂತ್ರಿಕ ಸಹಾಯಕ (Junior Technical Associate) ಹುದ್ದೆಗಳ ಭರ್ತಿಗೆ ಕೇಂದ್ರ ರೈಲ್ವೆ ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮತ್ತು ಆಫ್‌ಲೈನ್ ಎರೂ ಪ್ರಕಾರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾರ್ಚ್ 14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ cr.indianrailways.gov.in ಗೆ ಭೇಟಿ ನೀಡಬಹುದು.
ಒಟ್ಟು 20 ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗಳನ್ನು ವರ್ಗಾನುಸಾರ ವಿಂಗಡಣೆ ಮಾಡಲಾಗಿದೆ.
Unreserved: 8 ಹುದ್ದೆಗಳು
SC: 3 ಹುದ್ದೆಗಳು
ST: 2 ಹುದ್ದೆಗಳು
OBC: 5 ಹುದ್ದೆಗಳು
EWS: 2 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ BE/ Diploma/ ಸಿವಿಲ್ ಇಂಜಿನಿಯರಿಂಗ್ ನಲ್ಲಿ B.Sc ಪದವಿ ಮಾಡಿರಬೇಕು.
SBI RECRUITMENT 2022: ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ಎಸ್‌ಬಿಐ ನೇಮಕಾತಿ
ವಯೋಮಿತಿ: ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 33 ವರ್ಷದೊಳಗೆ ಇರಬೇಕು. OBC ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷ, SC/ ST ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ವರ್ಗಾನುಸಾರ ಅರ್ಜಿ ಶುಲ್ಕ ವಿಧಿಸಲಾಗಿದೆ. ಸಾಮ್ಯಾನ್ಯ ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕ ವಿಧಿಸಲಾಗಿದೆ. SC/ ST/ OBC, ಮೈನಾರಿಟಿ, EWS ಮತ್ತು ಮಹಿಳಾ ಅಭ್ಯರ್ಥಿಗಳಿಗೆ ₹250 ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾದ ವಿಳಾಸ:
Deputy Chief Personnel Officer (Construction)
Office of the Chief Administrative Officer (Construction),
New Administrative Building,
6th Floor Opposite Anjuman Islam School,
D.N. Road, Central Railway,
Mumbai CSTM, Maharashtra 400001
FCI Recruitment 2022: ಆಹಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ
ಇಂಜಿನಿಯರ್ ಸೇರಿ ವಿವಿಧ ಹುದ್ದೆಗಳಿಗೆ ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ನೇಮಕಾತಿ: ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ (Indian Railway Construction Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಸೀನಿಯರ್ ವರ್ಕ್ಸ್ ಇಂಜಿನಿಯರ್ (senior Work Engineer), ವ್ಯವಸ್ಥಾಪಕ (Manager) ಸೇರಿ ಒಟ್ಟು 29 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 30 ,2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ ತಾಣ https://www.ircon.org ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿದ LLB, ಡಿಪ್ಲೊಮಾ, PG ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ: ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಸೀನಿಯರ್ ವರ್ಕ್ ಇಂಜಿನಿಯರ್/ಸರ್ವೆ , ಸುರಕ್ಷತಾ ಇಂಜಿನಿಯರ್, ಸೀನಿಯರ್ ವರ್ಕ್ಸ್ ಇಂಜಿನಿಯರ್ / ಗುಣಮಟ್ಟ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ಮಿತಿ ನಿಗದಿಪಡಿಸಲಾಗಿದೆ. ಮಿಕ್ಕ ಹುದ್ದೆಗಳಿಗೆ ಗರಿಷ್ಠ 50 ವರ್ಷಗಳು, OBC ಅವರಿಗೆ ಗರಿಷ್ಠ 38 ವರ್ಷ, SC / ST ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ನೀಡಲಾಗಿದೆ.