ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ಸೈಂಟಿಸ್ಟ್‌ ಹುದ್ದೆ, 1 ಲಕ್ಷದ 70 ಸಾವಿರ ವೇತನ!

By Suvarna NewsFirst Published Mar 19, 2024, 2:16 PM IST
Highlights

ನೀವು ಉದ್ಯೋಗ ಅರಸುತ್ತಿದ್ದೀರಾ? ಹಾಗಾದರೆ ಬೆಂಗಳೂರಿನ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ಸೈಂಟಿಸ್ಟ್‌ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸೈಂಟಿಸ್ಟ್‌ ಹುದ್ದೆಯಲ್ಲಿ ಕೆಲಸ ಮಾಡಬೇಕೆನ್ನುವವರಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್‌ 31 ಕೊನೆಯ ದಿನವಾಗಿದೆ.

ನೀವು ಉದ್ಯೋಗ ಅರಸುತ್ತಿದ್ದೀರಾ? ಹಾಗಾದರೆ ಬೆಂಗಳೂರಿನ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ಸೈಂಟಿಸ್ಟ್‌ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸೈಂಟಿಸ್ಟ್‌ ಹುದ್ದೆಯಲ್ಲಿ ಕೆಲಸ ಮಾಡಬೇಕೆನ್ನುವವರಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್‌ 31 ಕೊನೆಯ ದಿನವಾಗಿದೆ.

ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ಖಾಲಿ ಇರುವ 122 ಸೈಂಟಿಸ್ಟ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸ್ನಾತಕೋತ್ತರ ಪದವಿ ಪಡೆದವರು ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರಿ ಮಾದರಿ ಪಬ್ಲಿಕ್ ಶಾಲೆಗಳಲ್ಲಿ ಸಿಬಿಎಸ್‌ಇ, ಐಸಿಎಸ್‌ಇ ಪಠ್ಯಕ್ರಮ, ರಾಮನಗರ ಜಿಲ್ಲೆಯಿಂದ ಆರಂಭ

ವಿದ್ಯಾರ್ಹತೆ ಮತ್ತು ಹುದ್ದೆಗಳ ವಿವರ: ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ ವಿಜ್ಞಾನ /ಕೃಷಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ (ಮಾಸ್ಟರ್ಸ್‌ ಡಿಗ್ರಿ) ಪಡೆದಿರಬೇಕು. ಸಾಮಾನ್ಯ ವರ್ಗಕ್ಕೆ-50, ಎಸ್‌ಸಿ-20, ಎಸ್‌ಟಿ-9, ಒಬಿಸಿ-31, ಇಡಬ್ಲ್ಯುಎಸ್‌-12 ಮತ್ತು ಪಿಡಬ್ಲ್ಯುಬಿಡಿ ವರ್ಗಕ್ಕೆ 8 ಹುದ್ದೆಗಳಿವೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2024

ವಯೋಮಿತಿ ಮತ್ತು ಅರ್ಜಿ ಶುಲ್ಕ

ವಯೋಮಿತಿ:35 ವರ್ಷ

ಕೆಪಿಎಸ್‌ಸಿಯಿಂದ ಭರ್ಜರಿ ನೇಮಕಾತಿ, ವಿವಿಧ ಇಲಾಖೆಯಲ್ಲಿ 2500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ!

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ. ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ಸಂಬಳ

ಲಿಖಿತ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಉದ್ಯೋಗದ ಸ್ಥಳ:

ಬೆಂಗಳೂರು.

ಮಾಸಿಕ ವೇತನ

56,100 ರೂ.-1,77,500 ರೂ.

ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ನೇಮಕಾತಿ 2024 ಅಧಿಸೂಚನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು.

click me!