DFCCIL Recruitment 2022: ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗೆ ಡಿಎಫ್‌ಸಿಸಿಐಎಲ್ ನೇಮಕಾತಿ

By Suvarna News  |  First Published Mar 13, 2022, 7:55 PM IST

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್  ಖಾಲಿ ಇರುವ 7 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  ಅಭ್ಯರ್ಥಿಗಳು ಮಾರ್ಚ್ 21ರ ಒಳಗೆ ಆಫ್​ಲೈನ್​  ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 


ಬೆಂಗಳೂರು(ಮಾ.13): ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Dedicated Freight Corridor Corporation of India Limited-DFCCIL) ಖಾಲಿ ಇರುವ ಜನರಲ್ ಮ್ಯಾನೇಜರ್ (General Manager)  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 7 ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 21ರ ಒಳಗೆ ಆಫ್​ಲೈನ್​ (offline) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ https://dfccil.com/ ಗೆ ಭೇಟಿ ನೀಡಬಹುದು. 

ಶೈಕ್ಷಣಿಕ ವಿದ್ಯಾರ್ಹತೆ: ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೆಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ ಎಂಜಿನಿಯರಿಂಗ್ / ಎಸ್ ಮತ್ತು ಟಿ / ಎಲೆಕ್ಟ್ರಿಫಿಕೇಶನ್ ನಲ್ಲಿ ಪದವಿ ಮಾಡಿರಬೇಕು. ಜೊತೆಗೆ  ಎಲ್ಆರ್/ ಮೆಟ್ರೋ ರೈಲ್ವೆಗಳ ಮೇಲೆ ಸಿವಿಲ್ ಎಂಜಿನಿಯರಿಂಗ್ / ಎಸ್ & ಟಿ / ಎಲೆಕ್ಟ್ರಿಫಿಕೇಶನ್ ಪ್ರಾಜೆಕ್ಟ್‌ಗಳ ಬಗ್ಗೆ ಅಪಾರ ಅನುಭವವನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಕನಿಷ್ಠ 30 ವರ್ಷಗಳ ಅನುಭವ ಹೊಂದಿರಬೇಕು.

Latest Videos

undefined

ವಯೋಮಿತಿ: ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೆಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 65 ಆಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.

RCFL RECRUITMENT 2022: ರಾಷ್ಟ್ರೀಯ ರಾಸಾಯನಿಕ ಮತ್ತು ರಸಗೊಬ್ಬರ ನಿಯಮಿತದಲ್ಲಿ ನೇಮಕಾತಿ

ಆಯ್ಕೆ ಪ್ರಕ್ರಿಯೆ: ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೆಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂವಹನ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೆಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಗಳಿಗೆ ದಿನವೊಂದಕ್ಕೆ 6,700 ರೂ ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ ಮತ್ತು ವಿಧಾನ: ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಜನರಲ್ ಮ್ಯಾನೆಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಇಲಾಖೆಯ ಅಧಿಕೃತ ವೆಬ್‌ತಾಣದಿಂದ ಡೌನ್‌ಲೋಡ್ ಮಾಡಿಕೊಂಡು,  ಮಾರ್ಚ್ 21ರೊಳಗೆ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ DFCCIL, ಸುಪ್ರೀಂ ಕೋರ್ಟ್ ಮೆಟ್ರೋ ಸ್ಟೇಷನ್ ಬಿಲ್ಡಿಂಗ್ ಕಾಂಪ್ಲೆಕ್ಸ್, 5 ನೇ ಮಹಡಿ, ನವದೆಹಲಿ - 110001 ಗೆ ಅರ್ಜಿ ಸಲ್ಲಿಬೇಕು.

BECIL Recruitment 2022: ನರ್ಸಿಂಗ್ ಟ್ಯೂಟರ್ ಹುದ್ದೆಗೆ ಬಿಇಸಿಐಎಲ್‌ ನೇಮಕಾತಿ 

ನರ್ಸಿಂಗ್ ಟ್ಯೂಟರ್ ಹುದ್ದೆಗೆ ಬಿಇಸಿಐಎಲ್‌ ನೇಮಕಾತಿ: ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (Broadcast Engineering Consultants India Limited) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.  ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ನರ್ಸಿಂಗ್ ಟ್ಯೂಟರ್ (Nursing Tutor)  ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 22 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ www.becil.com ಆಸಕ್ತರು ಭೇಟಿ ನೀಡಬಹುದು. 

ಶೈಕ್ಷಣಿಕ ವಿದ್ಯಾರ್ಹತೆ: ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್  ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ  ಬಿಎಸ್‌ಸಿ, ಡಿಪ್ಲೊಮಾ,  ಸಿಸ್ಟರ್ ಟ್ಯೂಟರ್ ಕೋರ್ಸ್‌ ಮಾಡಿರಬೇಕು.  ಸ್ಟಾಫ್ ನರ್ಸ್  ಅಥವಾ ಹೋಮ್ ಸಿಸ್ಟರ್ ಆಗಿ  ಐದು ವರ್ಷಗಳ ಪ್ರಾಯೋಗಿಕ ಅನುಭವ ಹೊಂದಿರಬೇಕು. 

click me!