DRDO Recruitment 2022: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾರ್ಚ್ 14 ಕೊನೆ ದಿನ

By Suvarna News  |  First Published Mar 2, 2022, 7:00 PM IST

 ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ  ಗ್ಯಾಸ್ ಟಬ್ರೈನ್ ರಿಸರ್ಚ್‌ ಎಸ್ಟಾಬ್ಲಿಶ್‌ಮೆಂಟ್  ನಲ್ಲಿ ಖಾಲಿ ಇರುವ 150 ಅಪ್ರೆಂಟಿಸ್  ಟ್ರೈನಿಂಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಮಾರ್ಚ್ 14  ಕೊನೆಯ ದಿನವಾಗಿದೆ. 


ಬೆಂಗಳೂರು (ಮಾ.2): ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation - DRDO)  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಗ್ಯಾಸ್ ಟಬ್ರೈನ್ ರಿಸರ್ಚ್‌ ಎಸ್ಟಾಬ್ಲಿಶ್‌ಮೆಂಟ್ (GTRE) ನಲ್ಲಿ ಖಾಲಿ ಇರುವ 150 ಅಪ್ರೆಂಟಿಸ್  ಟ್ರೈನಿಂಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು,  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 14  ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://www.drdo.gov.in/ಗೆ ಭೇಟಿ ನೀಡಬಹುದು.

ಒಟ್ಟು 150 ಹುದ್ದೆಗಳ ವಿವರ 
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ : 75
ಡಿಪ್ಲೊಮ ಅಪ್ರೆಂಟಿಸ್ ಟ್ರೈನಿ : 20
ಐಟಿಐ ಅಪ್ರೆಂಟಿಸ್ ಟ್ರೈನಿ : 25
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ( ಜೆನೆರಲ್ ಸ್ಟ್ರೀಮ್ ): 30

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ  ಹುದ್ದೆಗಳ ಭರ್ತಿಗೆ  ಅರ್ಜಿ  ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೊಮ, ಬಿಇ, ಐಟಿಐ ಪಾಸಾಗಿರಬೇಕು.

Bank of Baroda recruitment 2022: ಮ್ಯಾನೇಜಿರಿಯಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ  ಹುದ್ದೆಗಳ ಭರ್ತಿಗೆ  ಅರ್ಜಿ  ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ವರ್ಗಾನುಸಾರ ವಯೋಮಿತಿ ಸಡಿಲಿಕೆ ಮಾಡಿದ್ದು, ಇಂತಿದೆ.
ಸಾಮಾನ್ಯ - 27 ವರ್ಷ.
ಒಬಿಸಿ - 30 ವರ್ಷ.
ಎಸ್‌ಸಿ /ಎಸ್‌ಟಿ - 32 ವರ್ಷ.
ಪಿಡಬ್ಲ್ಯೂಡಿ - 37 ವರ್ಷ.

ಆಯ್ಕೆ ಪ್ರಕ್ರಿಯೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ  ಹುದ್ದೆಗಳ ಭರ್ತಿಗೆ  ಅರ್ಜಿ  ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 14
ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ದಿನಾಂಕ : ಮಾರ್ಚ್ 25
ಅಪ್ರೆಂಟಿಸ್ ಟ್ರೈನಿಗೆ ಸೇರಲು ಇಚ್ಛೆ ದಾಖಲಿಸಿಕೊಳ್ಳುವ ದಿನಾಂಕ ಮಾರ್ಚ್ 31
ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ ಎಪ್ರಿಲ್ 22
ಅಪ್ರೆಂಟಿಸ್ ಟ್ರೈನಿಗೆ ಸೇರಿಸಿಕೊಳ್ಳುವ ದಿನಾಂಕ : ಮೇ 2

BMTC RECRUITMENT 2022: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಂಟಿಸಿ

ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation - DRDO) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ (Defence Food Research Laboratory - DFRL)ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಒಟ್ಟು 17 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಮಾರ್ಚ್ 3, 2022 ಕೊನೆಯ ದಿನವಾಗಿದೆ. ಹೆಚ್ಚಿನ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rac.gov.in ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ  ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆ ಪಡೆದಿರಬೇಕು.

ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ  ಆಹಾರ ತಂತ್ರಜ್ಞಾನ, ಬಿಎಸ್ಸಿ ಆಹಾರ ವಿಜ್ಞಾನ, ಬಯೋ-ಟೆಕ್ನಾಲಜಿ, ಬಯೋಇನ್‌ಫರ್ಮ್ಯಾಟಿಕ್ಸ್, ಬಯೋ-ಎಂಜಿನಿಯರಿಂಗ್, ಬಯೋಮೆಡಿಕಲ್ ಎಂಜಿನಿಯರಿಂಗ್, ಕೆಮಿಕಲ್ ಎಂಜಿನಿಯರಿಂಗ್, ಪಾಲಿಮರ್ ಎಂಜಿನಿಯರಿಂಗ್, ಪ್ಲಾಸ್ಟಿಕ್ ಎಂಜಿನಿಯರಿಂಗ್, ಪಾಲಿಮರ್ ಸೈನ್ಸ್‌ನಲ್ಲಿ B.Tech ಪಾಸಾಗಿರಬೇಕು.

ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಆಹಾರ ಮತ್ತು ಪೋಷಣೆ, ಹೋಟೆಲ್ ನಿರ್ವಹಣೆ, ಅಡುಗೆ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಶನ್, ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವಿ ಪಡೆದಿರಬೇಕು.

 

click me!