DRDO DFRL Recruitment 2022: ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Feb 17, 2022, 8:34 PM IST

ಡಿಆರ್‌ಡಿಒ ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಮಾರ್ಚ್ 3, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ


ಬೆಂಗಳೂರು(ಫೆ.17): ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation - DRDO) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ (Defence Food Research Laboratory - DFRL)ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಒಟ್ಟು 17 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಮಾರ್ಚ್ 3, 2022 ಕೊನೆಯ ದಿನವಾಗಿದೆ. ಹೆಚ್ಚಿನ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rac.gov.in ಭೇಟಿ ನೀಡಬಹುದು.

ಒಟ್ಟು 17 ಹುದ್ದೆಗಳ ಮಾಹಿತಿ ಇಂತಿದೆ:
ಗ್ರಾಜುಯೇಟ್ ಅಪ್ರೆಂಟಿಸ್ (Graduate Apprentice) – 8 ಹುದ್ದೆಗಳು
ಡಿಪ್ಲೋಮಾ ಅಪ್ರೆಂಟಿಸ್ (Diploma Apprentice) – 9 ಹುದ್ದೆಗಳು

Tap to resize

Latest Videos

NHAI RECRUITMENT 2022: ಇಂಜಿನಿಯರಿಂಗ್‌ ಪದವೀಧರರಿಗೆ ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗವಕಾಶ!

ಶೈಕ್ಷಣಿಕ ವಿದ್ಯಾರ್ಹತೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ  ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆ ಪಡೆದಿರಬೇಕು.

ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ  ಆಹಾರ ತಂತ್ರಜ್ಞಾನ, ಬಿಎಸ್ಸಿ ಆಹಾರ ವಿಜ್ಞಾನ, ಬಯೋ-ಟೆಕ್ನಾಲಜಿ, ಬಯೋಇನ್‌ಫರ್ಮ್ಯಾಟಿಕ್ಸ್, ಬಯೋ-ಎಂಜಿನಿಯರಿಂಗ್, ಬಯೋಮೆಡಿಕಲ್ ಎಂಜಿನಿಯರಿಂಗ್, ಕೆಮಿಕಲ್ ಎಂಜಿನಿಯರಿಂಗ್, ಪಾಲಿಮರ್ ಎಂಜಿನಿಯರಿಂಗ್, ಪ್ಲಾಸ್ಟಿಕ್ ಎಂಜಿನಿಯರಿಂಗ್, ಪಾಲಿಮರ್ ಸೈನ್ಸ್‌ನಲ್ಲಿ B.Tech ಪಾಸಾಗಿರಬೇಕು.

ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಆಹಾರ ಮತ್ತು ಪೋಷಣೆ, ಹೋಟೆಲ್ ನಿರ್ವಹಣೆ, ಅಡುಗೆ ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಶನ್, ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವಿ ಪಡೆದಿರಬೇಕು.

LIC Recruitment 2022: ಭಾರತೀಯ ಜೀವ ವಿಮಾ ನಿಗಮದಲ್ಲಿ ವಿಮಾ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ವಯೋಮಿತಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಯೋಮಿತಿ ಮಾನದಂಡಗಳ ಬಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ:  ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪದವಿ/ಡಿಪ್ಲೊಮಾ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಫರ್ ಲೆಟರ್ ಅಥವಾ ಈ ಮೇಲ್ ಮೂಲಕ ತಿಳಿಸಲಾಗುವುದು.

GAIL India Recruitment 2022 : ವಿವಿಧ ವಿಭಾಗದ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ

ವೇತನ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 8000 ರೂ ನಿಂದ 9000 ರೂ ಸ್ಟೈಪೆಂಡ್ ನೀಡಲಾಗುವುದು. 

ಉದ್ಯೋಗ ಸ್ಥಳ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ  ಅಪ್ರೆಂಟಿಸ್ ಟ್ರೈನಿಂಗ್  ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಉದ್ಯೋಗ ದೊರೆಯಲಿದೆ.

click me!