ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 8 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಎಪ್ರಿಲ್ 15 ಕೊನೆಯ ದಿನವಾಗಿದೆ.
ಬೆಂಗಳೂರು (ಎ.1): ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation - DRDO) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕಿರಿಯ ಸಂಶೋಧಕ (Junior Research Fellow) ಮತ್ತು ಸಂಶೋಧನಾ ಸಹಾಯಕ (Research Associate) ಸೇರಿ ಒಟ್ಟು 8 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಎಪ್ರಿಲ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ
ಒಟ್ಟು 8 ಹುದ್ದೆಗಳ ಮಾಹಿತಿ ಇಂತಿದೆ
ಸಂಶೋಧನಾ ಸಹಾಯಕ: 1 ಹುದ್ದೆ
ಕಿರಿಯ ಸಂಶೋಧಕ: 7 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.
ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಪಿಎಚ್‌ಡಿ ಅಥವಾ ರಸಾಯನಶಾಸ್ತ್ರದಲ್ಲಿ ತತ್ಸಮಾನ ಪದವಿ ಅಥವಾ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.
ಕಿರಿಯ ಸಂಶೋಧಕ (ರಸಾಯನಶಾಸ್ತ್ರ, ಭೌತಶಾಸ್ತ್ರ) ಹುದ್ದೆಗೆ ರಸಾಯನಶಾಸ್ತ್ರ / ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ NET ಪರೀಕ್ಷೆ ಪಾಸಾಗಿರಬೇಕು.
ಕಿರಿಯ ಸಂಶೋಧಕ (ಮೆಕ್ಯಾನಿಕಲ್) ಹುದ್ದೆಗೆ ಮೆಕ್ಯಾನಿಕಲ್ ನಲ್ಲಿ BE/ B.Tech ಪದವಿ/ಸ್ನಾತಕೋತ್ತರ ಪದವಿ ಮಾಡಿರಬೇಕು. NET/ GATE ಪರೀಕ್ಷೆ ಪಾಸಾಗಿರಬೇಕು.
IFFCO RECRUITMENT 2022 ಕೃಷಿ, ಕಾನೂನು ಪದವಿ ಪಡೆದವರಿಗೆ ಇಫ್ಕೊನಲ್ಲಿ ಉದ್ಯೋಗವಕಾಶ
ವಯೋಮಿತಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ವಯೋಮಿತಿ ಹೊಂದಿರಬೇಕು.
ಸಂಶೋಧನಾ ಸಹಾಯಕ ಹುದ್ದೆಗೆ ಗರಿಷ್ಠ 35 ವರ್ಷ
ಕಿರಿಯ ಸಂಶೋಧಕ ಹುದ್ದೆಗೆ ಗರಿಷ್ಠ 28 ವರ್ಷ
ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ.
ಸಂಶೋಧನಾ ಸಹಾಯಕ ಹುದ್ದೆಗೆ ಮಾಸಿಕ ₹54,000
ಕಿರಿಯ ಸಂಶೋಧಕ ಹುದ್ದೆಗೆ ಮಾಸಿಕ ₹31,000
BDL Recruitment 2022: ಮ್ಯಾನೇಜರ್ ಹುದ್ದೆಗೆ ನೇಮಕಾತಿ
ಭಾರತೀಯ ನೌಕಾಸೇನೆ ನೇಮಕಾತಿ: ಭಾರತೀಯ ನೌಕಾಸೇನೆಯಲ್ಲಿ (Indian Navy) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೌಕಾಸೇನೆಯು ಖಾಲಿ ಇರುವ ಒಟ್ಟು 2500 ಆರ್ಟಿಫಿಸರ್ ಅಪ್ರೆಂಟಿಸ್ (Artificer apprentices) ಮತ್ತು ಹಿರಿಯ ಮಾಧ್ಯಮಿಕ ನೇಮಕಾತಿ (Senior Secondary Recruits) ಬ್ಯಾಚ್‌ಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 5 ರೊಳಗೆ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್ಸೈಟ್ https://www.indiannavy.nic.in/ ಗೆ ಅಥವಾ https://www.joinindiannavy.gov.in/en ಭೇಟಿ ನೀಡಲು ಕೋರಲಾಗಿದೆ. ಮಾತ್ರವಲ್ಲ ಈ ಅವಕಾಶ ಅವಿವಾಹಿತ ಭಾರತೀಯ ಪುರುಷರಿಗೆ ಮಾತ್ರ ಹುದ್ದೆಗಳು ತೆರೆದಿರುತ್ತವೆ.
ಒಟ್ಟು 2500 ಹುದ್ದೆಗಳ ಮಾಹಿತಿ
ಆರ್ಟಿಫಿಸರ್ ಅಪ್ರೆಂಟಿಸ್ : 500 ಹುದ್ದೆಗಳು
ಹಿರಿಯ ಮಾಧ್ಯಮಿಕ ನೇಮಕಾತಿ: 2000 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ನೌಕಾಸೇನೆಯಲ್ಲಿ ಖಾಲಿ ಇರುವ ಆರ್ಟಿಫಿಸರ್ ಅಪ್ರೆಂಟಿಸ್ ಮತ್ತು ಹಿರಿಯ ಮಾಧ್ಯಮಿಕ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಪಿಯುಸಿ ಅಥವಾ ಅದಕ್ಕೆ ಸಮನಾದ ವಿಭಾಗದಲ್ಲಿ ಶೇ.60 ಅಂಕಗಳೊಂದಿಗೆ ಗಣಿತ ಮತ್ತು ಭೌತಶಾಸ್ತ್ರ, ಜೊತೆಗೆ ರಸಾಯನಶಾಸ್ತ್ರ/ಜೀವಶಾಸ್ತ್ರ/ಕಂಪ್ಯೂಟರ್ ವಿಜ್ಞಾನ ಯಾವುದಾದರೂ 1 ವಿಷಯ ಓದಿರಬೇಕು. ವಿದ್ಯಾರ್ಹತೆ ಪಡೆದಿರಬೇಕು.