ಬೆಂಗಳೂರು(ಜ. 26): ಪೂರ್ವ ಕರಾವಳಿ ರೈಲ್ವೆ (East Coast Railway)ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫಾರ್ಮಾಸಿಸ್ಟ್ (Pharmacist), ನರ್ಸಿಂಗ್ ಸೂಪರಿಂಟೆಂಡೆಂಟ್ (Nursing Superintendent ) ಹೀಗೆ ಒಟ್ಟು 8 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆ ದಿನ ಜನವರಿ 31. ಆಸಕ್ತರು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ eastcoastrail.indianrailways.gov.in ಗೆ ಭೇಟಿ ನೀಡಲು ಕೋರಲಾಗಿದೆ.
ಒಟ್ಟು 8 ಹುದ್ದೆಗಳು ಖಾಲಿ ಇದ್ದು ಅದರಲ್ಲಿ ನರ್ಸಿಂಗ್ ಸೂಪರಿಂಟೆಂಡೆಂಟ್- 07, ಫಾರ್ಮಾಸಿಸ್ಟ್- 01 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
undefined
ವಿದ್ಯಾರ್ಹತೆ: ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ನರ್ಸಿಂಗ್ (BSc Nursing), ಬಿ.ಫಾರ್ಮಾ, ಡಿ.ಫಾರ್ಮಾ, GNM ಫಾರ್ಮಾಸಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ (PUC) ಪಾಸಾಗಿರಬೇಕು.
ವಯೋಮಿತಿ: ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳೀಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿಪಡಿಸಲಾಗಿದ್ದು, ನರ್ಸಿಂಗ್ ಸೂಪರಿಂಟೆಂಡೆಂಟ್ ಗೆ 20-40 ವರ್ಷ, ಫಾರ್ಮಾಸಿಸ್ಟ್‌ಗೆ 20-35 ವರ್ಷ ನಿಗದಿಪಡಿಲಾಗಿದೆ.
RRB NTPC CBT 2 Exam 2022 : ರೈಲ್ವೆ ನೇಮಕಾತಿಯ ಸಿಬಿಟಿ-2 ಪರೀಕ್ಷೆಯ ದಿನಾಂಕ ಬಿಡುಗಡೆ
ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18,000 ದಿಂದ 44,900 ರೂ ತನ ವೇತನ ನೀಡಲಾಗುತ್ತದೆ. ಮತ್ತು ಆಯ್ಕೆಯಾದವರು ಒಡಿಶಾದ ಭುವನೇಶ್ವರದಲ್ಲಿ ಉದ್ಯೋಗ ಮಾಡಬೇಕಾಗುತ್ತದೆ.
2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ:
ಕೇಂದ್ರ ರೈಲ್ವೆಯ (Central Railway), ರೈಲ್ವೆ ನೇಮಕಾತಿ ಕೋಶ (Railway Recruitment Cell -RRC), ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 2422 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಫೆಬ್ರವರಿ 16, 2022ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://rrccr.com/ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Post Office Recruitment 2022: ಅಂಚೆ ಇಲಾಖೆಯ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ
ಒಟ್ಟು 2422 ಹುದ್ದೆಗಳ ವಿಂಗಡಣೆ ಇಂತಿದೆ.
ಮುಂಬೈ -1659
ಭುಸ್ವಾಲ್ ಕ್ಲಸ್ಟರ್ -418
ಪುಣೆ ಕ್ಲಸ್ಟರ್ -152
ನಾಗ್ಪುರ್ ಕ್ಲಸ್ಟರ್ -114
ಸೋಲಾಪುರ್ ಕ್ಲಸ್ಟರ್ -79
ಶೈಕ್ಷಣಿಕ ವಿದ್ಯಾರ್ಹತೆ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಶೇಕಡ.50 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಾಸ್ ಮಾಡಿರಬೇಕು, ಜತೆಗೆ ಸಂಬಂಧಿತ ವಿಭಾಗದಲ್ಲಿ ಐಟಿಐ ಪಾಸ್ ಮಾಡಿರಬೇಕು.
ವಯೋಮಿತಿ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು.
ಅರ್ಜಿ ಶುಲ್ಕ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ರೂ.100 ಪಾವತಿಸಬೇಕು. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 8000 ದಿಂದ 10000 ರೂ ವೇತನ ದೊರೆಯಲಿದೆ.