Eastern Coalfields Limited Recruitment 2022: ಬರೋಬ್ಬರಿ 313 ಮೈನಿಂಗ್ ಸಿರ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Contributor AsianetFirst Published Feb 6, 2022, 7:53 PM IST
Highlights

 ಕೋಲ್ ಇಂಡಿಯಾ ಲಿಮಿಟೆಡ್‌ನ ಅಂಗಸಂಸ್ಥೆಯಾದ  ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು  313 ಮೈನಿಂಗ್ ಸಿರ್ದಾರ್  ಹುದ್ದೆಗಳು ಖಾಲಿ ಇದ್ದು, ಫೆಬ್ರವರಿ 20 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ಬೆಂಗಳೂರು(ಫೆ.6): ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ತೊಡಗಿರುವ ಕೋಲ್ ಇಂಡಿಯಾ ಲಿಮಿಟೆಡ್‌ನ (Coal India Limited) ಅಂಗಸಂಸ್ಥೆಯಾದ  ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ (Eastern Coalfields Limited) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು  313 ಮೈನಿಂಗ್ ಸಿರ್ದಾರ್  (Mining Sirdar) ಹುದ್ದೆಗಳು ಖಾಲಿ ಇದ್ದು, ವರ್ಗಾನುಸಾರ ಹುದ್ದೆಗಳನ್ನು ಹಂಚಲಾಗಿದೆ. ಖಾಲಿ ಇರುವ ಹುದ್ದೆಗಳಿಗೆ  ಫೆಬ್ರವರಿ 20ರಿಂದ  ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ ವೆಬ್‌ಸೈಟ್ www.easterncoal.gov.in ಗೆ ಭೇಟಿ ನೀಡಬಹುದು.

ಒಟ್ಟು 313 ಹುದ್ದೆಗಳ ವರ್ಗಾನುಸಾರ ವಿಂಗಡಣೆ ಈ ಕೆಳಗಿನಂತಿದೆ
ಸಾಮಾನ್ಯ - 127 ಹುದ್ದೆಗಳು
EWS - 30 ಹುದ್ದೆಗಳು
OBC - 83 ಹುದ್ದೆಗಳು
SC - 46 ಹುದ್ದೆಗಳು
ST - 23 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ:  ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ  ಕನಿಷ್ಠ 12ನೇ ತರಗತಿ ಪಾಸ್ ಆಗಿರಬೇಕು. ಅಲ್ಲದೆ, ಡಿಜಿಎಂಎಸ್ ನೀಡಿದ ಮೈನಿಂಗ್ ಸಿರ್ದಾರ್‌ಶಿಪ್‌ನ ಮಾನ್ಯ ಪ್ರಮಾಣಪತ್ರ ಹೊಂದಿರಬೇಕು. ಜೊತೆಗೆ ಅನಿಲ ಪರೀಕ್ಷೆಯ ಮಾನ್ಯ ಪ್ರಮಾಣಪತ್ರ ಮತ್ತು ಮಾನ್ಯವಾದ ಪ್ರಥಮ ಚಿಕಿತ್ಸಾ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ. ಇಲ್ಲದಿದ್ದರೆ ಮೈನಿಂಗ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಪದವಿ ಮತ್ತು ಮಾನ್ಯವಾದ ಗ್ಯಾಸ್ ಟೆಸ್ಟಿಂಗ್ ಪ್ರಮಾಣಪತ್ರ ಮತ್ತು ಮಾನ್ಯವಾದ ಪ್ರಥಮ ಚಿಕಿತ್ಸಾ ಪ್ರಮಾಣಪತ್ರ ಹೊಂದಿರಬೇಕು.

ವೇತನ ವಿವರ: ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 31,852 ರೂಪಾಯಿ ವೇತನ ನೀಡಲಾಗುತ್ತದೆ.

SBI SCO Recruitment 2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ:
-ಮೊದಲು ಅಧಿಕೃತ ವೆಬ್‌ಸೈಟ್ easterncoal.gov.in ಗೆ ಭೇಟಿ ನೀಡಿ.
-ಅಲ್ಲಿ ನೀಡಲಾಗಿರುವ ನೇಮಕಾತಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
-ಈ ವೇಳೆ ನಿಮಗೆ ಮೈನಿಂಗ್ ಸಿರ್ದಾರ್ ಹುದ್ದೆಗೆ ಅರ್ಜಿ ಸಲ್ಲಿಸಲು ಲಿಂಕ್ ಕಾಣಿಸುತ್ತದೆ
-ಅರ್ಜಿ ನಮೂನೆಯಲ್ಲಿ ಕೋರಿದ ಮಾಹಿತಿಯನ್ನು ಭರ್ತಿ ಮಾಡಿ, ಸಬ್‌ಮಿಟ್ ಮಾಡಿ.
-ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಿ.

KPSC SELECTION LIST 2022 ANNOUNCED: ವಿವಿಧ ಇಲಾಖೆಯ ಹುದ್ದೆಗಳಿಗೆ ಹೊಸದಾಗಿ ಆಯ್ಕೆಪಟ್ಟಿ ಪ್ರಕಟಿಸಿದ ಕೆಪಿಎಸ್‌ಸಿ 

ಗ್ರೂಪ್​ ಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬೆಮೆಲ್: 

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (Bharat Earth Movers Limited - BEML) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ಗ್ರೂಪ್​ A ಪೋಸ್ಟ್​​ಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ  ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗೆ https://www.bemlindia.in/ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 25 ಹುದ್ದೆಯ ಮಾಹಿತಿ:
ಡೆಪ್ಯುಟಿ ಜನರಲ್ ಮ್ಯಾನೇಜರ್-5
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್-6
ಸೀನಿಯರ್ ಮ್ಯಾನೇಜರ್-5
ಮ್ಯಾನೇಜರ್-8
ಅಸಿಸ್ಟೆಂಟ್ ಮ್ಯಾನೇಜರ್-1

ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ  ಗ್ರೂಪ್​ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

click me!