ದಕ್ಷಿಣ ರೈಲ್ವೆಯು ಹಂತ 1 ಮತ್ತು 2 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 8 ಕೊನೆಯ ದಿನವಾಗಿದೆ. ಪೂರ್ವ ರೈಲ್ವೆ ಇಲಾಖೆಯಲ್ಲಿ 3115 ಹುದ್ದೆಗಳು ಖಾಲಿ ಇದ್ದು, ಅಕ್ಟೋಬರ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ದಕ್ಷಿಣ ರೈಲ್ವೆಯು ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದ ಮೇಲೆ ಹಂತ 1 ಮತ್ತು 2 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು RRCMAS ನ ಅಧಿಕೃತ ಸೈಟ್ rrcmas.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 8, 2022 ಕೊನೆಯ ದಿನಾಂಕವಾಗಿದೆ. ಈ ನೇಮಕಾತಿ ಡ್ರೈವ್ ನಲ್ಲಿ ಒಟ್ಟು 16 ಪೋಸ್ಟ್‌ಗಳನ್ನು ಭರ್ತಿ ಮಾಡುತ್ತದೆ. ಹಂತ 1 ರಲ್ಲಿ 13 ಹುದ್ದೆಗಳು ಮತ್ತು ಹಂತ 2 ರಲ್ಲಿ 3 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಶೈಕ್ಷಣಿಕ ವಿದ್ಯಾರ್ಹತೆ: ದಕ್ಷಿಣ ರೈಲ್ವೆಯು ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದ ಮೇಲೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.
ಹಂತ 1ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಅಥವಾ ಐಟಿಐ ಅಥವಾ ಎನ್‌ಸಿವಿಟಿ ನೀಡಿದ ಸಮಾನ ಅಥವಾ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಪ್ರಮಾಣಪತ್ರವನ್ನು ಉತ್ತೀರ್ಣರಾಗಿರಬೇಕು.
ಹಂತ 2ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12 ನೇ ತರಗತಿ ಅಥವಾ ಅದಕ್ಕೆ ಸಮಾನ ಪರೀಕ್ಷೆಯಲ್ಲಿ ಒಟ್ಟಾರೆಯಾಗಿ ಶೇಕಡಾ 50 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ತಂತ್ರಜ್ಞರ ವರ್ಗಕ್ಕೆ, ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಸೇರಿದಂತೆ ಯಾವುದೇ ಇತರ ಅರ್ಹತೆಯನ್ನು ಪರ್ಯಾಯ ಅರ್ಹತೆಯಾಗಿ ಸ್ವೀಕರಿಸಲಾಗುವುದಿಲ್ಲ.
undefined
ವಯೋಮಿತಿ: ದಕ್ಷಿಣ ರೈಲ್ವೆಯು ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದ ಮೇಲೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 33 ವರ್ಷದ ಒಳಗಿರಬೇಕು.
ಪರೀಕ್ಷಾ ಶುಲ್ಕಗಳು: ಪರೀಕ್ಷಾ ಶುಲ್ಕವು ಶುಲ್ಕ ರಿಯಾಯಿತಿ ವಿಭಾಗಗಳನ್ನು ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳಿಗೆ 500 ರೂ ನಿಗದಿ ಮಾಡಲಾಗಿದೆ. ಮತ್ತು ಎಸ್‌ಸಿ/ಎಸ್‌ಟಿ/ ಮಾಜಿ ಸೈನಿಕ/ ಅಂಗವಿಕಲರು/ ಮಹಿಳೆ/ ತೃತೀಯಲಿಂಗಿ/ ಆರ್ಥಿಕವಾಗಿ ಹಿಂದುಳಿದ ವರ್ಗ/ ಅಲ್ಪಸಂಖ್ಯಾತರಿಗೆ ಸೇರಿದ ಎಲ್ಲಾ ಅಭ್ಯರ್ಥಿಗಳಿಗೆ 250 ರೂ ಮಾಡಲಾಗಿದೆ.
ಪೂರ್ವ ರೈಲ್ವೆಯಲ್ಲಿ ಬರೋಬ್ಬರಿ 3115 ಹುದ್ದೆಗಳಿಗೆ ನೇಮಕಾತಿ: ಪೂರ್ವ ರೈಲ್ವೆಯಲ್ಲಿ ಬರೋಬ್ಬರಿ 3115 ಅಪ್ರೆಂಟಿಸ್‌ಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ indianrailways.gov.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
CDAC Recruitment 2022; ಇಂಜಿನಿಯರ್ ಪದವೀಧರರಿಗೆ ಉದ್ಯೋಗ, 14 ಲಕ್ಷ ರು. ವರೆಗೆ
ಶೈಕ್ಷಣಿಕ ವಿದ್ಯಾರ್ಹತೆ: ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ಪಾಸ್ ಆಗಿರಬೇಕು. NCVT/SCVT ಸೂಚನೆಯಂತೆ ಸಂಬಂಧಿಸಿದ ವಿಷಯದಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು.
KSP CONSTABLE RECRUITMENT 2022: ವಿವಿಧ ಹುದ್ದೆಗಳಿಗೆ ತೃತೀಯ ಲಿಂಗಿಗಳಿಗೂ ಸೇರಿ ನೇಮಕಾತಿ
ವಯೋಮಿತಿ: ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 15 ವರ್ಷದಿಂದ 24 ವರ್ಷಗಳ ಒಳಗಿನ ವಯಸ್ಸಿನವರಾಗಿರಬೇಕು,
NCERT Recruitment 2022: ಖಾಲಿ ಇರುವ 292 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ: ಐಟಿಐ ನಲ್ಲಿ ಪಡೆದ ವಿದ್ಯಾರ್ಹತೆ ಮತ್ತು ಸರಾಸರಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಗೆ ಕರೆದು ಬಳಿಕ ಆಯ್ಕೆ ಮಾಡಲಾಗುತ್ತದೆ.