ಭಾರತೀಯ ರೈಲ್ವೆಯ ಪೂರ್ವ ಇಲಾಖೆ ವಿಭಾಗದಲ್ಲಿ ಒಟ್ಟು 2792 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾದ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಜ.29): ಪೂರ್ವ ರೈಲ್ವೆ 2792 ಅಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
14-02-2020ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 13/3/2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
undefined
ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌ನಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವ 10+2 ಕ್ಕಿಂತ ಕಡಿಮೆ ತತ್ಸಮಾನವನ್ನು ಶೇ 50ರಷ್ಟು ಅಂಕಗಳೊಂದಿಗೆ ತೇರ್ಗಡೆಗೊಳಿಸಿರಬೇಕು.
ವಯೋಮಿತಿ: ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 15ರಿಂದ 24 ವರ್ಷ ವಯೋಮಿತಿಯಲ್ಲಿರಬೇಕು.
ವಿವಿಧ ಹುದ್ದೆ ನೇಮಕಾತಿಗೆ ಕೇಂದ್ರ ಲೋಕ ಸೇವಾ ಆಯೋಗ ಅರ್ಜಿ ಆಹ್ವಾನ
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿಪಡಿಸಲಾಗಿದ್ದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ಪ್ರಕ್ರಿಯೆ: ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಮಾಡಿ