ECIL Recruitment 2022: ಇಂಜಿನಿಯರ್ ಹುದ್ದೆಗಳ ಪದವೀಧರರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ

By Suvarna News  |  First Published Jan 10, 2022, 7:50 PM IST

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ 150 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 18  ಕೊನೆಯ ದಿನಾಂಕವಾಗಿದೆ.
 


ಬೆಂಗಳೂರು (ಜ.10): ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Electronics Corporation of India Limited-ECIL) ಖಾಲಿ ಇರುವ  ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  145 ಗ್ರಾಜುಯೇಟ್ ಅಪ್ರೆಂಟಿಸ್ (Graduate Apprentice) ಮತ್ತು 5 ಡಿಪ್ಲೋಮಾ ಅಪ್ರೆಂಟಿಸ್ ( Diploma Apprentice) ಸೇರಿ ಒಟ್ಟು 150 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಜನವರಿ 18  ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ecil.co.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಇಸಿಐಎಲ್‌ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್  ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ  ಕಡ್ಡಾಯವಾಗಿ  ಡಿಪ್ಲೋಮಾ, ಬಿಇ, ಬಿ.ಟೆಕ್​ ಪೂರ್ಣಗೊಳಿಸಿರಬೇಕು. 
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಎಂಜಿನಿಯರಿಂಗ್
ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್
ಮೆಕ್ಯಾನಿಕಲ್ ಇಂಜಿನಿಯರಿಂಗ್
ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್
ಮಾಡಿರಬೇಕು.

Latest Videos

undefined

ವಯೋಮಿತಿ:  ಇಸಿಐಎಲ್‌ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್  ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 25 ವರ್ಷ ಆಗಿರಬೇಕು. SC ಮತ್ತು ST 5 ವರ್ಷಗಳು, OBCಗೆ 3 ವರ್ಷಗಳು ಮತ್ತು PwD ಅಭ್ಯರ್ಥಿಗಳಿಗೆ 10 ವರ್ಷಗಳು ಸಡಿಲಿಕೆ ನೀಡಲಾಗಿದೆ.

ARMY SCHOOL RECRUITMENT 2022: ದೇಶದಾದ್ಯಂತ ಸೇನಾ ಶಾಲೆಗೆ 8700 ಶಿಕ್ಷಕರ ನೇಮಕಾತಿ, ಜನವರಿ 28ರೊಳಗೆ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಮತ್ತು  ಮೆರಿಟ್ ಪಟ್ಟಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ನಡೆಯಲಿದ್ದು , ಫೆಬ್ರವರಿ1, 2022 ರಿಂದ ಆರಂಭವಾಗಲಿದೆ. 

ವೇತನ: ಇಸಿಐಎಲ್‌ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್  ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಜೊತೆಗೆ  ಮಾಸಿಕ 8000 ದಿಂದ 9000 ಸ್ಟೈಪೆಂಡ್ ನೀಡಲಾಗುತ್ತದೆ. ಮತ್ತು ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಯು ತೆಲಂಗಾಣದ ಹೈದಾರಾಬಾದ್​​ನಲ್ಲಿ ಉದ್ಯೋಗ  ಮಾಡಬೇಕಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 18
ಹುದ್ದೆಗಳಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ ಜನವರಿ 20 
ಅಭ್ಯರ್ಥಿಗಳು ಜಾಯಿನ್ ಆಗುವ ಮೊದಲ ತಾತ್ಕಾಲಿಕ ಪಟ್ಟಿ ಬಿಡುಗಡೆ ಜನವರಿ 24 ಮತ್ತು 25
ಎರಡನೇ ಪಟ್ಟಿ/ಪ್ಯಾನಲ್ ಪಟ್ಟಿ ಬಿಡುಗಡೆ ಜನವರಿ 27
ಅಭ್ಯರ್ಥಿಗಳು ಜಾಯಿನ್ ಆಗುವ ಎರಡನೇ ತಾತ್ಕಾಲಿಕ ಪಟ್ಟಿ  ಬಿಡುಗಡೆ ಜನವರಿ 29 ಮತ್ತು 31
ಅಪ್ರೆಂಟಿಸ್ ತರಬೇತಿ ಆರಂಭವಾಗುವ ದಿನಾಂಕ ಫೆಬ್ರವರಿ 1

NCERT RECRUITMENT 2022: 54 ಹುದ್ದೆಗಳ ಭರ್ತಿಗೆ ಮುಂದಾದ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮಂಡಳಿ

ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆಯ ರಿಸರ್ವ್ ಲಿಸ್ಟ್‌ ಬಿಡುಗಡೆ: ಕೇಂದ್ರ ಲೋಕಸೇವಾ ಆಯೋಗ (Union Public Service Commission- UPSC) ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ 2020 ರ (Engineering Services Examination 2020 ) ರಿಸರ್ವ್ ಲಿಸ್ಟ್‌ ಅನ್ನು ಬಿಡುಗಡೆ ಮಾಡಲಾಗಿದೆ. ಸದರಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್‌ಸೈಟ್‌ upsc.gov.in ಗೆ ಭೇಟಿ ನೀಡಿ ಫಲಿತಾಂಶವನ್ನು ಪರೀಕ್ಷಿಸಬಹುದು. ಕೇಂದ್ರ ಲೋಕಸೇವಾ ಆಯೋಗವು ಎಪ್ರಿಲ್ 12, 2021ರಂದು  302 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿಗೆ ಶಿಫಾರಸು ಮಾಡಿ ನೋಟಿಸ್ ಬಿಡುಗಡೆ ಮಾಡಿತ್ತು.

ಪ್ರಸ್ತುತ ರೈಲ್ವೆ ಸಚಿವಾಲಯದ ಬೇಡಿಕೆಯಂತೆ ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆಯ ಆಧಾರದ ಮೇಲೆ ಉಳಿದ ಹುದ್ದೆಗಳ ನೇಮಕಾತಿಗೆ ಆಯೋಗವು 41 ಅಭ್ಯರ್ಥಿಗಳ ರಿಸರ್ವ್‌ ಲಿಸ್ಟ್‌ ಅನ್ನು ಬಿಡುಗಡೆ ಮಾಡಿದೆ. ಈ ಅಭ್ಯರ್ಥಿಗಳ ಪೈಕಿ ಸಾಮಾನ್ಯ-30, ಒಬಿಸಿ-09, ಇಡಬ್ಲ್ಯೂಎಸ್ (Economically Weaker Section)-01, ST-1 ವರ್ಗದವರ ಹೆಸರು ಪಟ್ಟಿಯಲ್ಲಿದೆ. ಸದ್ಯ ಕೇಂದ್ರ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ರಿಸರ್ವ್ ಲಿಸ್ಟ್‌ ನಲ್ಲಿನ ಅಭ್ಯರ್ಥಿಗಳೊಂದಿಗೆ ರೈಲ್ವೆ ಸಚಿವಾಲಯ ನೇರ ಸಂಪರ್ಕ ಮಾಡಿ, ಮುಂದಿನ ಪ್ರಕ್ರಿಯೆ ನಡೆಸಲಿದೆ. 

click me!