ESCI Recruitment 2022: ರಾಜ್ಯ ನೌಕರರ ವಿಮಾ ನಿಗಮ ನೇಮಕಾತಿ

Published : Mar 15, 2022, 07:03 PM IST
ESCI Recruitment 2022: ರಾಜ್ಯ ನೌಕರರ ವಿಮಾ ನಿಗಮ ನೇಮಕಾತಿ

ಸಾರಾಂಶ

ರಾಜ್ಯ ನೌಕರರ ವಿಮಾ ನಿಗಮ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 93 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಎಪ್ರಿಲ್ 12 ರಂದು ಕೊನೆಯ ದಿನವಾಗಿದೆ. 

ಬೆಂಗಳೂರು(ಮಾ.15): ರಾಜ್ಯ ನೌಕರರ ವಿಮಾ ನಿಗಮ (Employees State Insurance Corporation - ESIC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಾಮಾಜಿಕ ಭದ್ರತಾ ಅಧಿಕಾರಿ, ಮ್ಯಾನೇಜರ್, ಸೂಪರಿಂಟೆಂಡೆಂಟ್ ಸೇರಿ ಒಟ್ಟು 93 ಹುದ್ದೆಗಳ ಭರ್ತಿಗೆ   ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ.  ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  ಎಪ್ರಿಲ್ 12 ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ ತಾಣ  http://www.esic.nic.in/ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.  

ವರ್ಗಾನುಸಾರ 93 ಹುದ್ದೆಗಳ ಹಂಚಿಕೆ ಹೀಗಿದೆ
ಕಾಯ್ದಿರಿಸಲಾಗದ ವರ್ಗ (UC): 43 ಹುದ್ದೆಗಳು
ಪರಿಶಿಷ್ಟ ಜಾತಿ (SC): 9 ಹುದ್ದೆಗಳು
ಪರಿಶಿಷ್ಟ ಪಂಗಡ (ST): 8 ಹುದ್ದೆಗಳು
OBC: 24ಹುದ್ದೆಗಳು
EWS: 9 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ: ರಾಜ್ಯ ನೌಕರರ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ವಾಣಿಜ್ಯ, ಕಾನೂನು, ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಪದವಿ ಮಾಡಿರಬೇಕು. ಮಾತ್ರವಲ್ಲ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

UIDAI Recruitment 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ

ವಯೋಮಿತಿ: ರಾಜ್ಯ ನೌಕರರ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 21 ರಿಂದ 27  ವರ್ಷದ ಒಳಗಿರಬೇಕು.

ಅರ್ಜಿ ಶುಲ್ಕ: ರಾಜ್ಯ ನೌಕರರ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹500, SC/ST/PWD/ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳು ₹250 ಅರ್ಜಿ ಶುಲ್ಕ ಪಾವತಿಸಬೇಕು. 

ಆಯ್ಕೆ ಪ್ರಕ್ರಿಯೆ: ರಾಜ್ಯ ನೌಕರರ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ, ಕಂಪ್ಯೂಟರ್ ಕೌಶಲ್ಯ ಪರೀಕ್ಷೆ ಮತ್ತು ವಿವರಣಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ರಾಜ್ಯ ನೌಕರರ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ₹44,900 ರಿಂದ ₹1,42,400 ವೇತನ ದೊರೆಯಲಿದೆ.

CIIL RECRUITMENT 2022: ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ

ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ: ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ (Central Institute of Indian Languages) ಖಾಲಿ ಇರುವ  ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪ್ರಾಜೆಕ್ಟ್ ಡೈರೆಕ್ಟರ್, ಅಸೋಸಿಯೇಟ್ ಫೆಲೋ, ಆಫೀಸ್ ಸೂಪರಿಂಟೆಂಡೆಂಟ್ ಸೇರಿ ಒಟ್ಟು 38 ವಿವಿಧ ಹುದ್ದೆಗಳು ಖಾಲಿ ಇದ್ದು,  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CIIL ನ ಅಧಿಕೃತ ವೆಬ್‌ಸೈಟ್ ciil.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ಮಾರ್ಚ್ 29 ಆಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.
ಪ್ರಾಜೆಕ್ಟ್ ಡೈರೆಕ್ಟರ್ – ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಮಾಡಿರಬೇಕು.
ಸೀನಿಯರ್ ಫೆಲೋ –  ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಮಾಡಿರಬೇಕು.
ಅಸೋಸಿಯೇಟ್ ಫೆಲೋ – ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಮಾಡಿರಬೇಕು.
ಆಫೀಸ್ ಸೂಪರಿಂಟೆಂಡೆಂಟ್ – ಹುದ್ದೆಗಳಿಗೆ ಪದವಿ ಮಾಡಿರಬೇಕು
ಜೂನಿಯರ್ ಅಕೌಂಟ್ ಆಫೀಸರ್ – ಹುದ್ದೆಗಳಿಗೆ ಪದವಿ ಮಾಡಿರಬೇಕು
ಅಪ್ಪರ್ ಡಿವಿಷನ್ ಕ್ಲರ್ಕ್ – ಹುದ್ದೆಗಳಿಗೆ  ಪದವಿ ಮಾಡಿರಬೇಕು
ಲೋವರ್ ಡಿವಿಷನ್ ಕ್ಲರ್ಕ್ – ಹುದ್ದೆಗಳಿಗೆ ಪದವಿ ಮಾಡಿರಬೇಕು

PREV
Read more Articles on
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್