ಗುರುವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 4ರಷ್ಟು ಏರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ನವದೆಹಲಿ (ಮಾ.7): ಕೇಂದ್ರ ಸರ್ಕಾರಿ ನೌಕರರಿಗೆ ನರೇಂದ್ರ ಮೋದಿ ಸರ್ಕಾರ ಬಂಪರ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರಿ ನೌಕರಿಯಲ್ಲಿರುವ ವ್ಯಕ್ತಿಗಳ ತುಟ್ಟಿಭತ್ಯೆಯನ್ನು ಶೇ. 4ರಷ್ಟು ಏರಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪೀಯುಷ್ ಗೋಯೆಲ್ ತಿಳಿಸಿದ್ದಾರೆ. 2024ರ ಜನವರಿ 1 ರಿಂದ ಅನ್ವಯವಾಗುವಂತೆ ಇದು ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 4ರಷ್ಟು ಏರಿಸಲು ನಿರ್ಧಾರ ಮಾಡಲಾಗಿದೆ. ಅದರೊಂದಿಗೆ ಶಿವರಾತ್ರಿಗೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ನ್ಯೂಸ್ ಸಿಕ್ಕಿದಂತಾಗಿದೆ. 2024ರ ಜನವರಿ 1 ರಿಂದ ಜಾರಿಗೆ ಬರುವಂತೆ ಡಿಎ ಏರಿಕೆಯನ್ನು ಜಾರಿಗೆ ತರಲು ಪ್ರಸ್ತಾವನೆಯನ್ನು ಇರಿಸಲಾಗಿದೆ ಎಂದು ಈಗಾಗಲೇ ವರದಿಯಾಗಿತ್ತು. ಅದರಂತೆಯೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಡಿಎ ಹೆಚ್ಚಳಕ್ಕೆ ಅನುಮೋದನೆ ಸಿಕ್ಕಿರುವ ಕಾರಣ, ಕೇಂದ್ರ ಸರ್ಕಾರಿ ನೌಕರರ ಡಿಎಯನ್ನು ಶೇಕಡಾ 50ಕ್ಕೆ ಏರಿದಂತಾಗಲಿದೆ.
ಅಕ್ಟೋಬರ್ 2023 ರಲ್ಲಿ, ಕೇಂದ್ರ ಸಚಿವ ಸಂಪುಟವು 48.67 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 67.95 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗುವಂತೆ 2023ರ ಜುಲೈ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆ ಮತ್ತು ತುಟ್ಟಿಭತ್ಯೆ ಪರಿಹಾರವನ್ನು 4 ಶೇಕಡಾ ಪಾಯಿಂಟ್ ಏರಿಕೆ ಮಾಡುವ ಮೂಲಕ ಶೇ. 46ಕ್ಕೆ ಹೆಚ್ಚಿಸಿತು. DR ಮತ್ತು DA ಹೆಚ್ಚಳದಿಂದ ಉಂಟಾಗುವ ಸಂಚಿತ ಆರ್ಥಿಕ ಪರಿಣಾಮವು ವಾರ್ಷಿಕವಾಗಿ 12,857 ಕೋಟಿ ಎಂದು ಅಂದಾಜಿಸಲಾಗಿತ್ತು. 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿ ಹೆಚ್ಚಳವಾಗಿದೆ.
ಸರ್ಕಾರಿ ನೌಕರರಿಗೆ ಬಂಪರ್ ನ್ಯೂಸ್, ಮಾರ್ಚ್‌ನಲ್ಲಿ ಶೇ. 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಸಾಧ್ಯತೆ!
ಇದರೊಂದಿಗೆ ಐದು ವರ್ಷಗಳಿಗೆ 10,371.92 ಕೋಟಿ ರೂ.ಗಳ ವೆಚ್ಚದೊಂದಿಗೆ 'ಭಾರತ AI ಮಿಷನ್'ಗೆ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಈಶಾನ್ಯ ಪ್ರದೇಶದಲ್ಲಿ ಕೈಗಾರಿಕೀಕರಣವನ್ನು ಉತ್ತೇಜಿಸಲು 10,237 ಕೋಟಿ ರೂ ಯೋಜನೆಗೆ ಕ್ಯಾಬಿನೆಟ್ ಅನುಮೋದನೆ ಸಿಕ್ಕಿದೆ.
ನವರಾತ್ರಿ ಹಬ್ಬಕ್ಕೆ ಗುಡ್ ನ್ಯೂಸ್, ಸರ್ಕಾರಿ ನೌಕರರಿಗೆ ಶೇ.4 ರಷ್ಟು DA ಹೆಚ್ಚಳಕ್ಕೆ ಅನುಮೋದನೆ!
ಸೆಣಬಿನ ಕನಿಷ್ಠ ಬೆಂಬಲ ಬೆಲೆ ಏರಿಕೆ: 2024-25ಕ್ಕೆ ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ 285 ರೂಪಾಯಿ ಏರಿಕೆ ಮಾಡುವ ತೀರ್ಮಾನ ಮಾಡಿದ್ದು, ಅದರೊಂದಿಗೆ ಕ್ವಿಂಟಾಲ್‌ಗೆ 5335 ರೂಪಾಯಿಯಂತೆ ಕೇಂದ್ರ ಸರ್ಕಾರ ಖರೀದಿ ಮಾಡಲಿದೆ. ಇದರಿಂದ ಪಶ್ಚಿಮ ಬಂಗಾಳ, ಬಿಹಾರ ಭಾಗದ ಲಕ್ಷಾಂತರ ಸೆಣಬಿನ ರೈತರಿಗೆ ಅನುಕೂಲವಾಗಲಿದೆ.
Govt hikes DA by 4 pc to 50 pc; new rate effective Jan 1, 2024: Union Minister Piyush Goyal
— Press Trust of India (@PTI_News)